ಸೋಮವಾರಪೇಟೆ,ನ.೨೧: ಚಿಕ್ಕಅಳುವಾರದ ಕೊಡಗು ವಿಶ್ವ ವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗ ಹಾಗೂ ಯಡೂರಿನ ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನ.೨೪ರಂದು ಬಿಟಿಸಿಜಿ ಕಾಲೇಜು ಮೈದಾನದಲ್ಲಿ ಕೊಡಗು ವಿಶ್ವ ವಿದ್ಯಾನಿಲಯಕ್ಕೆ ಒಳಪಟ್ಟ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ವಾಲಿಬಾಲ್ ಪಂದ್ಯಾಟ ನಡೆಯಲಿದೆ.

ಅಂದು ಬೆಳಿಗ್ಗೆ ೧೦ ಗಂಟೆಗೆ ಕ್ರೀಡಾಕೂಟದ ಉದ್ಘಾಟನೆಯನ್ನು ಶಾಸಕ ಡಾ. ಮಂತರ್ ಗೌಡ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಡಿ. ಹರ್ಷ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ವಿಶ್ವ ವಿದ್ಯಾನಿಲಯದ ಡಾ. ಸುರೇಶ್ ಕುಮಾರ್ ಭಾಗವಹಿಸಲಿದ್ದಾರೆ.

ಸಮಾರೋಪ ಸಮಾರಂಭ ಸಂಜೆ ೪ಕ್ಕೆ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಹಾನಗಲ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಕೆ. ಯಶಾಂತ್‌ಕುಮಾರ್, ಕಾಫಿ ಬೆಳೆಗಾರ ಬಿ.ಎಂ. ಸುರೇಶ್ ಹಾಗೂ ಯಡೂರು ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ವೈ.ಡಿ. ಮೋಹನ್ ಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ದೈಹಿಕ ಶಿಕ್ಷಣ ನಿರ್ದೇಶಕ ಗುರುಪ್ರಸಾದ್ ತಿಳಿಸಿದ್ದಾರೆ.