ಮಡಿಕೇರಿ, ನ. ೨೨: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಆಡಳಿತ ಮಂಡಳಿ ಪದಗ್ರಹಣ ಹಾಗೂ ಕಾರ್ಯಚಟುವಟಿಕೆ ಚಾಲನೆ ಕಾರ್ಯಕ್ರಮ ತಾ. ೨೫ ರಂದು ಮಡಿಕೇರಿ ಕೊಡವ ಸಮಾಜ ಸಭಾಂಗಣದಲ್ಲಿ ನಡೆಯಲಿದೆ.

ಅಂದು ಬೆಳಿಗ್ಗೆ ೧೦.೩೦ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷÀ ಶಿವಾನಂದ ತಗಡೂರು ಉದ್ಘಾಟಿಸಲಿದ್ದಾರೆ. ಉಪಾಧ್ಯಕ್ಷ ಮದನ್ ಗೌಡ ಆಡಳಿತ ಮಂಡಳಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಸಂಘದ ಕಾರ್ಯಚಟುವಟಿಕೆಗೆ ಚಾಲನೆ ನೀಡಲಿದ್ದಾರೆ. ಶಕ್ತಿ ಪತ್ರಿಕೆ ಪ್ರಧಾನ ಸಂಪಾದಕ ಜಿ. ರಾಜೇಂದ್ರ ಮುಖ್ಯ ಭಾಷಣ ಮಾಡಲಿದ್ದಾರೆ. ಸಂಘದ ಜಿಲ್ಲಾಧ್ಯಕ್ಷೆ ಬಿ.ಆರ್. ಸವಿತಾ ರೈ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ, ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ, ಕಾರ್ಯನಿರತ ಪತ್ರಕರ್ತರ ಸಂಘದ ಸೋಮವಾರಪೇಟೆ ತಾಲೂಕು ಅಧ್ಯಕ್ಷ ವಿಶ್ವ ಕುಂಬೂರು, ವೀರಾಜಪೇಟೆ ತಾಲೂಕು ಅಧ್ಯಕ್ಷ ರೆಜಿತ್ ಕುಮಾರ್ ಗುಹ್ಯ, ಪೊನ್ನಂಪೇಟೆ ತಾಲೂಕು ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ, ಕುಶಾಲನಗರ ತಾಲೂಕು ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.