ಕೊಡ್ಲಿಪೇಟೆ, ನ. ೨೨:: ಕೊಡ್ಲಿಪೇಟೆ ಪ.ಪೂ ಕಾಲೇಜಿನಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು.

ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ವಿವಿಧ ಬಗೆಯ ಕಂಪೆನಿಗಳ ಲಾಂಛನಗಳನ್ನು ಬಿಡಿಸಿ ತಮ್ಮಲ್ಲಿರುವ ಕಲಾ ಪ್ರತಿಭೆಯನ್ನು ಪ್ರದರ್ಶಿಸಿದರು. ಹಾಗೆಯೇ ಕುಕ್ ವಿಥೌಟ್ ಫೈರ್ ಎಂಬ ಕೌಶಲ್ಯ ಕಾರ್ಯಕ್ರಮದಡಿಯಲ್ಲಿ ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ತಯಾರಿಸಿದರು.

ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಬಿ.ಕೆ. ಯತೀಶ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರಶಂಶಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಹಾಜರಿದ್ದರು.