ಸೋಮವಾರಪೇಟೆ, ನ. ೨೨: ಮಕ್ಕಳು ವೈಜ್ಞಾನಿಕ ಮನೋಭಾವ ದೊಂದಿಗೆ ಸಂಶೋಧನಾ ಪ್ರವೃತ್ತಿ ಬೆಳೆಸಿಕೊಳ್ಳಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಕರೆ ನೀಡಿದರು. ಇಲ್ಲಿನ ಓ.ಎಲ್.ವಿ. ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವಿಜ್ಞಾನಕ್ಕೆ ಸಂಬAಧಿಸಿದ ವಿವಿಧ ಮಾದರಿ, ಪ್ರಯೋಗ, ಚಟುವಟಿಕೆಗಳು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದರೊಂದಿಗೆ ಸಂಶೋಧನಾ ಪ್ರವೃತ್ತಿಯನ್ನು ಹುಟ್ಟು ಹಾಕುತ್ತದೆ. ಈ ನಿಟ್ಟಿನಲ್ಲಿ ಮಕ್ಕಳಿಗೆ ವಿಜ್ಞಾನದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದರು.
ಶಾಲೆಗಳಲ್ಲಿ ಕಲಿಕೆಗೆ ಪೂರಕವಾದ ವಾತಾವರಣ, ಗುಣಾತ್ಮಕ ಶಿಕ್ಷಣ ದೊರೆತಾಗ ಮಾತ್ರ ಶಾಲೆಯ ಮೇಲೆ ಪೋಷಕರಿಗೂ ಅಭಿಮಾನ ಮೂಡುತ್ತದೆ. ವಿಶ್ವದಾದ್ಯಂತ ಇರುವ ರಾಷ್ಟçಗಳಲ್ಲಿ ಭಾರತ ದೇಶದ ಯುವಶಕ್ತಿಯೇ ಶೇ. ೫೬ ರಷ್ಟಿದೆ. ಪಾಶ್ಚಿಮಾತ್ಯ ರಾಷ್ಟçಗಳಲ್ಲೂ ಭಾರತ ದೇಶದ ಯುವಕರೇ ನಿರಂತರ ದುಡಿಮೆ, ಆತ್ಮವಿಶ್ವಾಸ, ಏಕಾಗ್ರತೆ, ನಿರ್ದಿಷ್ಟ ಗುರಿಯೊಂದಿಗೆ ಕೆಲಸ ಮಾಡುತ್ತಾರೆ. ಪ್ರತಿಯೋರ್ವ ವಿದ್ಯಾರ್ಥಿಯೂ ಈ ದೇಶದ ಆಸ್ತಿಯಾಗಬೇಕೆಂದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಹಿರಿಯ ವಕೀಲ ಜಿ.ಜೆ.ಗಿರೀಶ್ ಮಾತನಾಡಿ, ನಾವು ಪಡೆದ ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಉತ್ತಮ ಬದಲಾವಣೆ ಮತ್ತು ಸಾಮಾಜಿಕ ಸುಧಾರಣೆಗಳಾಗಲು ಸಾಧ್ಯ. ಈಗಿನ ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಸಾಕಷ್ಟು ಅವಕಾಶಗಳಿದ್ದು ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು.
ವೇದಿಕೆಯಲ್ಲಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ನಿರ್ಮಲಾ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಅರುಣ ಜ್ಯೋತಿ, ಶಾಲಾ ವ್ಯವಸ್ಥಾಪಕಿ ದಯಾ ಉಪಸ್ಥಿತರಿದ್ದರು. ಮೆರಿಟಾ ಜಾನ್ ಕಾರ್ಯಕ್ರಮ ನಿರ್ವಹಿಸಿದರು. ಶಾಲಾ ವಿದ್ಯಾರ್ಥಿಗಳು ತಯಾರಿಸಿದ ವಿವಿಧ ವಿಜ್ಞಾನ ವಸ್ತು ಪ್ರದರ್ಶನಗಳು ಗಮನ ಸೆಳೆದವು.