ಶನಿವಾರಸಂತೆ, ನ. ೨೩: ಕೊಡಗು ಜಿಲ್ಲಾ ಪಂಚಾಯಿತಿ, ಸೋಮವಾರಪೇಟೆ ತಾಲೂಕು ಪಂಚಾಯಿತಿ ಹಾಗೂ ಶನಿವಾರಸಂತೆ ಗ್ರಾಮ ಪಂಚಾಯಿತಿ ವತಿಯಿಂದ ಶನಿವಾರಸಂತೆ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ಹಾಗೂ ವಾಲಿಬಾಲ್ ಅಂಕಣವನ್ನು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಲೋಕಾರ್ಪಣೆಗೊಳಿಸಿದರು.
ನಂತರ ಅವರು ಮಾತನಾಡಿ, ಸಾರ್ವಜನಿಕರ ಸೇವೆ, ಕೆಲಸ ಮಾಡಲು ಜನಪ್ರತಿನಿಧಿಗಳು ಒಂದಾಗಿ ಕೈಜೋಡಿಸಬೇಕು.ಜನಪ್ರತಿನಿಧಿಗಳು ಬದಲಾದರೂ ಅಧಿಕಾರಿಗಳೂ ವರ್ಗಾವಣೆಗೊಂಡರು ಇರುವ ಅಧಿಕಾರಿಗಳು ಪ್ರೀತಿ-ವಿಶ್ವಾಸದಿಂದ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಹರೀಶ್, ಉಪಾಧ್ಯಕ್ಷ ಸರ್ದಾರ್ ಅಹಮದ್, ಸದಸ್ಯರು, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಂತರಾಜ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್, ಉದ್ಯೋಗ ಖಾತ್ರಿ ಯೋಜನೆ ಸಹಾಯಕ ನಿರ್ದೇಶಕ ರಾಕೇಶ್, ತಾಲೂಕು ಸಂಯೋಜಕ ರಂಜಿತ್, ವಸತಿ ಯೋಜನೆ ಸಹಾಯಕ ಅಧಿಕಾರಿ ಭಾನುಪ್ರಕಾಶ್, ಶನಿವಾರಸಂತೆ ಪೊಲೀಸ್ ಠಾಣೆ ವೃತ್ತನಿರೀಕ್ಷಕ ಕೃಷ್ಣರಾಜ್, ಕಾಂಗ್ರೆಸ್ ಮುಖಂಡರಾದ ಎಸ್.ಸಿ.ಶರತ್ ಶೇಖರ್, ಆದಿತ್ಯ, ಮಹಮ್ಮದ್ ಪಾಶ, ಇತರರು ಹಾಜರಿದ್ದರು.