ಚೆಯ್ಯಂಡಾಣೆ, ನ. ೨೩ : ವೀರಾಜಪೇಟೆಯಿಂದ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಪೆರುಂಬಾಡಿ ಮಾಕುಟ್ಟ ರಸ್ತೆ ತೀವ್ರ ಹದಗೆಟ್ಟ ಪರಿಣಾಮ ಬಹುಜನ ಸಮಾಜ ಪಕ್ಷದ ವತಿಯಿಂದ ತಾ.೨೪ ರಂದು ರಸ್ತೆ ತಡೆ ನಡೆಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷರಾದ ಎ.ಎ. ದೀವಿಲ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪ್ರತಿಭಟನೆ ಬಗ್ಗೆ ಮಾಹಿತಿ ನೀಡಿದ ದೀವಿಲ್ ಕುಮಾರ್ ಕೊಡಗು ಜಿಲ್ಲೆಯ ಬಹುತೇಕ ಎಲ್ಲಾ ರಸ್ತೆಗಳು ಹದಗೆಟ್ಟಿದ್ದು ರಸ್ತೆ ದುರಸ್ತಿ ನಡೆಸದೆ ಆಡಳಿತ ವರ್ಗ ಸಾರ್ವಜನಿಕರಿಗೆ ಅನ್ಯಾಯ ವ್ಯಸಗುತ್ತಿದೆ. ಹದಗೆಟ್ಟ ರಸ್ತೆಯಿಂದ ಸಾರ್ವಜನಿಕರು ಸಂಚರಿಸಲು ಬವಣೆ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮೂಲಭೂತ ಸೌಕರ್ಯಗಳಲ್ಲಿ ಒಂದಾಗಿರುವ ರಸ್ತೆಗಳನ್ನು ಉತ್ತಮ ರೀತಿಯಲ್ಲಿ ಒದಗಿಸದೆ ಇಂದು ಸಂಬAಧಪಟ್ಟ ಇಲಾಖೆಗಳು ನಿರ್ಲಕ್ಷö್ಯ ವಹಿಸಿ ಜನರಿಗೆ ಮೋಸ ಮಾಡುತ್ತಿದೆ, ಕೂಡಲೇ ಜಿಲ್ಲೆಯ ಎಲ್ಲಾ ರಸ್ತೆಗಳನ್ನು ಶೀಘ್ರದಲ್ಲಿ ದುರಸ್ತಿಪಡಿಸಬೇಕೆಂದು ಒತ್ತಾಯಿಸಿ ತಾ. ೨೪ರಂದು (ಇಂದು) ವೀರಾಜಪೇಟೆ-ಕೇರಳ ರಾಜ್ಯ ಹೆದ್ದಾರಿಯ ಪೆರುಂಬಾಡಿ ಬಳಿಯ ಮುಖ್ಯ ರಸ್ತೆಯಲ್ಲಿ ಪಕ್ಷದ ನೂರಾರು ಕಾರ್ಯಕರ್ತರೊಂದಿಗೆ ರಸ್ತೆ ತಡೆ ನಡೆಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೊಡಗಿನಾದ್ಯಂತ ರಸ್ತೆ ಅವ್ಯವಸ್ಥೆಯ ಬಗ್ಗೆ ಮುಂದಿನ ದಿನಗಳಲ್ಲಿ ಉಗ್ರ ಹೊರಾಟ ನಡೆಸಲಿದ್ದೇವೆ ಎಂದರು.

ಗೋಷ್ಠಿಯಲ್ಲಿ ಬಹುಜನ ಸಮಾಜ ಪಕ್ಷದ ವೀರಾಜಪೇಟೆ ತಾಲೂಕು ಅಧ್ಯಕ್ಷ ಸಜನ್ ದೇವಯ್ಯ, ಉಪಾಧ್ಯಕ್ಷ ದೀಪು ಮೊಣ್ಣಪ್ಪ, ಕೋಶಾಧಿಕಾರಿ ವಿಮಲ ಇದ್ದರು.