ಗೋಣಿಕೊಪ್ಪ, ನ. ೨೪: ವಿವಿಧ ಸಂಘ- ಸಂಸ್ಥೆಗಳ ಸಹಯೋಗದಲ್ಲಿ ತಾ. ೨೯ ರಂದು ಗೋಣಿಕೊಪ್ಪದಲ್ಲಿರುವ ಶ್ರೀ ಉಮಾಮಹೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ಮಾಧ್ಯಮ ಸ್ಪಂದನದಿAದ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಮಾಧ್ಯಮ ಸ್ಪಂದನ ಸ್ಥಾಪಕ ಅಜ್ಜಮಾಡ ರಮೇಶ್ ಕುಟ್ಟಪ್ಪ ತಿಳಿಸಿದ್ದಾರೆ. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ರಕ್ತನಿಧಿ ಕೇಂದ್ರದವರು ರಕ್ತ ಸಂಗ್ರಹಿಸಲಿದ್ದು, ಅಂದು ಬೆಳಗ್ಗೆ ೧೦ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ಸಾರ್ವಜನಿಕರು ರಕ್ತದಾನ ಮಾಡಬಹುದಾಗಿದೆ. ರಕ್ತದಾನಿಗಳು ಮಾಧ್ಯಮ ಸ್ಪಂದನ ರಕ್ತದಾನದ ಸಂಚಾಲಕರಾದ ವಿ.ವಿ. ಅರುಣ್ ಕುಮಾರ್ ೯೪೪೮೩೩೧೩೩೯ ಅವರಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದೆAದು ಅಜ್ಜಮಾಡ ರಮೇಶ್ ಕುಟ್ಟಪ್ಪ ಪ್ರಕಟಣೆಯಲ್ಲಿ ಕೋರಿದ್ದಾರೆ.