ಸೋಮವಾರಪೇಟೆ, ನ. ೨೪: ತಾ. ೨೬ರಂದು ತಾಲೂಕು ಮಟ್ಟದಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸುವ ಬಗ್ಗೆ ಪೂರ್ವಭಾವಿ ಸಭೆ ತಹಶೀಲ್ದಾರ್ ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ತಹಶೀಲ್ದಾರ್ ಕೃಷ್ಣಮೂರ್ತಿ ಮಾತನಾಡಿ, ಸಂವಿಧಾನ ದಿನಾಚರಣೆಯನ್ನು ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಬೇಕು. ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಜರಿರಬೇಕು. ಶಿಕ್ಷಣ ಇಲಾಖೆಯವರು ಹೆಚ್ಚು ಮುತುವರ್ಜಿ ವಹಿಸಬೇಕು ಎಂದರು.
ಸಭೆಯಲ್ಲಿದ್ದ ದಲಿತ ಸಂಘಟನೆಯ ಮುಖಂಡ ಟಿ.ಈ. ಸುರೇಶ್ ಮಾತನಾಡಿ, ಕಳೆದ ಬಾರಿ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿಯಲ್ಲಿ ಬೆರಳೆಣಿಕೆಯಷ್ಟು ಸರಕಾರಿ ಅಧಿಕಾರಿ-ಸಿಬ್ಬಂದಿಗಳು ಹಾಜರಿದ್ದರು. ಇದರ ಬಗ್ಗೆ ಸಂಬAಧಪಟ್ಟ ಅಧಿಕಾರಿಗಳು ಕ್ರಮ ವಹಿಸಲಿಲ್ಲ. ಸಂವಿಧಾನ ದಿನಾಚರಣೆಯಲ್ಲಿ ಕಡ್ಡಾಯವಾಗಿ ಎಲ್ಲಾ ಅಧಿಕಾರಿಗಳು ಭಾಗಿಯಾಗಬೇಕೆಂದು ಒತ್ತಾಯಿಸಿದರು.
ತಹಶೀಲ್ದಾರ್ ಕೃಷ್ಣಮೂರ್ತಿ ಮಾತನಾಡಿ, ಸರಕಾರಿ ಕಾರ್ಯಕ್ರಮಗಳಿಗೆ ಹಾಜರಾಗದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ವರದಿ ನೀಡಲಾಗುವುದು ಎಂದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದೇಗೌಡ ಮಾಹಿತಿ ನೀಡಿ, ಬಾಣಾವರ ರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಬಸವೇಶ್ವರ ರಸ್ತೆ ಮಾರ್ಗವಾಗಿ ಜೆ.ಸಿ. ವೇದಿಕೆ ವರೆಗೆ ಮೆರವಣಿಗೆ ನಡೆಯಲಿದೆ. ಶಾಲಾ ಮಕ್ಕಳು ರಾಷ್ಟç ಧ್ವಜಗಳನ್ನು ಹಿಡಿದು, ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ ಎಂದರು.
ನAತರ ವೇದಿಕೆಯಲ್ಲಿ ತಹಶೀಲ್ದಾರ್ ಸಂವಿಧಾನ ಪೀಠಿಕೆ ಬೋಧಿಸಲಿದ್ದಾರೆ. ಸಂವಿಧಾನ ದಿನಾಚರಣೆ ಅಂಗವಾಗಿ ಶಾಲಾಮಕ್ಕಳಿಗೆ ಪ್ರಬಂಧ ಸ್ಫರ್ಧೆ ಏರ್ಪಡಿಸಲಾಗಿದೆ. ವಿಜೇತರಿಗೆ ಬಹುಮಾನ ನೀಡಲಾಗುವುದು ಎಂದರು. ಸಭೆಯಲ್ಲಿ ಪ್ರಮುಖರಾದ ಹಾನಗಲ್ ಜಯಪ್ಪ, ಕೆಂಚೇಶ್ವರ, ಹೊನ್ನಪ್ಪ, ಕೆ.ಎ. ಆದಮ್, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯೆ ಮೋಹಿನಿ ಸೇರಿದಂತೆ ಅಧಿಕಾರಿಗಳು ಇದ್ದರು.