ಮಡಿಕೇರಿ, ನ. ೨೪: ತಾ.೨೬ ರಂದು (ನಾಳೆ) ೩೫ನೇ ವರ್ಷದ ಕೊಡವ ನ್ಯಾಷನಲ್ ಡೇ ಮಡಿಕೇರಿ ಹೊರವಲಯದ ಕ್ಯಾಪಿಟಲ್ ವಿಲೇಜ್‌ನಲ್ಲಿ ಬೆ.೧೦:೩೦ಕ್ಕೆ ನಡೆಯಲಿದೆ ಎಂದು ಸಿಎನ್‌ಸಿ ಸಂಘಟನೆಯ ಅಧ್ಯಕ್ಷ ಎನ್.ಯು ನಾಚಪ್ಪ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಹಾರ್ವರ್ಡ್ ವಿದ್ವಾಂಸ, ನಿವೃತ್ತ ಐಎಎಸ್ ಅಧಿಕಾರಿ ಡಾ.ಸಂಜೀವ್ ಚೋಪ್ರಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಕುರಿತು ಮಾತನಾಡಲಿದ್ದಾರೆ.

ಅತಿಥಿಗಳಾಗಿ ಎಂ.ಎಲ್.ಸಿ ಅಡಗೂರು ಹೆಚ್. ವಿಶ್ವನಾಥ್, ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಚಿರಿಯಪಂಡ ಸುರೇಶ್ ನಂಜಪ್ಪ, ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡAಡ ನಾಣಯ್ಯ ಮತ್ತು ವೈದ್ಯರಾದ ಡಾ.ಮಾತಂಡ ಅಯ್ಯಪ್ಪ ಭಾಗವಹಿಸಲಿದ್ದಾರೆ.