ವೀರಾಜಪೇಟೆ, ನ. ೨೪: ವೀರಾಜಪೇಟೆ-ಮಾಕುಟ್ಟ ರಸ್ತೆ ಬಂದ್ ಮಾಡಿ ಬಹುಜನ ಸಮಾಜ ಪಕ್ಷದ ವತಿಯಿಂದ ಪ್ರತಿಭಟನೆ ನಡೆಯಿತು.

ಬಹುಜನ ಸಮಾಜ ಪಕ್ಷದ ಜಿಲ್ಲಾ ಅದ್ಯಕ್ಷ ದಿವಿಲ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕೊಡಗಿನ ಗಡಿ ಪ್ರದೇಶದಲ್ಲಿ ಲೋಕೋಪಯೋಗಿ ಇಲಾಖೆ ರಸ್ತೆಯು ಸಂಚಾರಕ್ಕೆ ಯೋಗ್ಯವಾಗಿಲ್ಲ, ತಕ್ಷಣ ಮುಖ್ಯ ರಸ್ತೆಯ ಕಾಮಗಾರಿ ನಡೆಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಲೋಕೋಪಯೋಗಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ಮಾಡಲಾಗುವುದು. ಕೊಡಗಿನ ಬಹುತೇಕ ಮುಖ್ಯ ರಸ್ತೆಗಳೆ ಹಾಳಾಗಿವೆ ಎಂದು ದಿವಿಲ್ ಕುಮಾರ್ ಆರೋಪಿಸಿದರು.

ಪ್ರತಿಭಟನೆಯಲ್ಲಿ ವೀರಾಜಪೇಟೆ ತಾಲೂಕು, ಸೋಮವಾರಪೇಟೆ ತಾಲೂಕು, ಮಡಿಕೇರಿ ತಾಲೂಕಿನ ಪದಾಧಿಕಾರಿಗಳು ಭಾಗವಹಿಸಿದ್ದರು.

ವೀರಾಜಪೇಟೆ ತಹಶೀಲ್ದಾರ್ ಪ್ರವೀಣ್ ಅವರ ಪರವಾಗಿ ಪ್ರಭಾರ ತಹಶೀಲ್ದಾರ್ ಪ್ರದೀಪ್ ಹಾಗೂ ಶಿರಸ್ತೇದಾರ್ ಪುರುಷೋತ್ತಮ ಮತ್ತು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಲೋಕೇಶ್ ಹಾಗೂ ಪುನೀತ್ ಆಗಮಿಸಿ ಮನವಿ ಪತ್ರ ಸ್ವೀಕರಿಸಿದರು. ಕೆಲಕಾಲ ರಸ್ತೆ ತಡೆಯಿಂದ ವಾಹನಗಳ ಸಂಚಾರಕ್ಕೆ ತೊಡಕು ಉಂಟಾಗಿತ್ತು.