ಸೋಮವಾರಪೇಟೆ, ನ. ೨೬: ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದಿAದ ಕೊಡಗು ಜಿಲ್ಲೆಯ ಒಕ್ಕಲಿಗ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿದ್ದು, ಇದರೊಂದಿಗೆ ಸೋಮವಾರಪೇಟೆಯಲ್ಲಿ ವಿದ್ಯಾರ್ಥಿನಿಯರ ಉಚಿತ ವಸತಿ ನಿಲಯ ಸ್ಥಾಪನೆಗೆ ಕ್ರಮ ವಹಿಸಲಾಗುತ್ತಿದೆ. ಇದೇ ಕಟ್ಟಡದಲ್ಲಿ ಹೃದಯ ಸಂಬAಧಿತ ಪ್ರಥಮ ಚಿಕಿತ್ಸಾ ಕೇಂದ್ರ ಸ್ಥಾಪನೆಯ ಉದ್ದೇಶವಿದ್ದು, ಕೊಡಗಿನಲ್ಲಿ ನರ್ಸಿಂಗ್ ಕಾಲೇಜು ತೆರೆಯುವ ಬಗ್ಗೆಯೂ ಚಿಂತನೆ ಹರಿಸಲಾಗಿದೆ ಎಂದು ಸಂಘದ ಕೊಡಗು ಜಿಲ್ಲಾ ನಿರ್ದೇಶಕ ಹೆಚ್.ಎನ್. ರವೀಂದ್ರ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆಯಷ್ಟೇ ರಾಜ್ಯ ಒಕ್ಕಲಿಗರ ಸಂಘದ ನೂತನ ಆಡಳಿತ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಅವಿರೋಧವಾಗಿ ನಡೆದಿದೆ. ಉಪ ಸಮಿತಿಗಳಿಗೆ ಪದಾಧಿಕಾರಿಗಳ ನೇಮಕ ನಡೆಯುತ್ತಿದೆ ಎಂದರು.
ಈ ಹಿಂದೆಯೇ ಸೋಮವಾರಪೇಟೆಯಲ್ಲಿ ಒಕ್ಕಲಿಗ ಸಮುದಾಯದ ವಿದ್ಯಾರ್ಥಿನಿಯರ ವಸತಿ ನಿಲಯ ಸ್ಥಾಪನೆಗೆ ಕ್ರಮ ವಹಿಸಲಾಗಿತ್ತು. ಆದರೆ ಕಾಣದ ಕೈಗಳ ರಾಜಕೀಯ ಕುತಂತ್ರದಿAದಾಗಿ ಅಲ್ಪ ಹಿನ್ನಡೆಯಾಗಿತ್ತು. ಇದೀಗ ಒತ್ತಡ ಹಾಕಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದೆ. ಮುಂದಿನ ೮ ತಿಂಗಳ ಒಳಗೆ ಹಾಸ್ಟೆಲ್ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದರು. ಇದರೊಂದಿಗೆ ಮಡಿಕೇರಿ ಹಾಗೂ ಕುಶಾಲನಗರದಲ್ಲಿಯೂ ವಸತಿ ನಿಲಯ ಸ್ಥಾಪನೆಗೆ ಚಿಂತಿಸಲಾಗಿದೆ. ಸೂಕ್ತ ಜಾಗದ ಹುಡುಕಾಟ ನಡೆಯುತ್ತಿದೆ. ನಿವೇಶನ ಲಭ್ಯವಾದ ತಕ್ಷಣ ಪ್ರಕ್ರಿಯೆ ಆರಂಭಿಸಲಾಗುವುದು. ಕೊಡಗಿನಲ್ಲಿ ನರ್ಸಿಂಗ್ ಕಾಲೇಜು ಸ್ಥಾಪನೆ ಸಂಬAಧ ಈಗಾಗಲೇ ಆದಿಚುಂಚನಗಿರಿ ಮಹಾ ಸಂಸ್ಥಾನದ ಮಠಾಧೀಶರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಒಕ್ಕಲಿಗರ ಸಂಘದ ಮೂಲಕ ಕಾಲೇಜು ಸ್ಥಾಪನೆಗೆ ಕ್ರಮವಹಿಸುವ ಸಂಬAಧ ಪ್ರಕ್ರಿಯೆಗಳು ನಡೆಯುತ್ತಿವೆ. ನರ್ಸಿಂಗ್ ಕಾಲೇಜು ಸ್ಥಾಪನೆಯಿಂದ ಜಿಲ್ಲೆಯ ಸಾವಿರಾರು ಮಂದಿಗೆ ಅನುಕೂಲವಾಗಲಿದೆ ಎಂದು ರವೀಂದ್ರ ತಿಳಿಸಿದರು.
ಪ್ರತಿಭಾ ಪುರಸ್ಕಾರ : ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದಿAದ ಪ್ರತಿ ವರ್ಷದಂತೆ ಈ ವರ್ಷವೂ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ. ೯೫ಕ್ಕಿಂತ ಅಧಿಕ ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ನಗದು ಬಹುಮಾನದೊಂದಿಗೆ ಪುರಸ್ಕರಿಸಲಾಗುವುದು ಎಂದರು.
ಸೋಮವಾರಪೇಟೆಯ ಒಕ್ಕಲಿಗರ ಸಮುದಾಯ ಭವನದಲ್ಲಿ ಡಿ.೬ರಂದು ಬೆಳಿಗ್ಗೆ ೧೦ ಗಂಟೆಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ. ಸಂಘದ ನಿರ್ದೇಶಕರುಗಳು ಭಾಗಿಯಾಗಲಿದ್ದಾರೆ ಎಂದರು. ಗೋಷ್ಠಿಯಲ್ಲಿ ಸಂಘದ ಸದಸ್ಯರಾದ ಹಾಲಪ್ಪ, ಪೃಥ್ವಿ ಗೌಡಳ್ಳಿ, ಗಿರಿಧರ್ ಉಪಸ್ಥಿತರಿದ್ದರು.