ಮಡಿಕೇರಿ, ನ. ೨೬: ಗಾಳಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಳಿಬೀಡು ಗ್ರಾಮದಲ್ಲಿ ಕುಷ್ಠರೋಗ ಪತ್ತೆಹಚ್ಚುವ ಆಂದೋಲನದಡಿಯಲ್ಲಿ ನವೆಂಬರ್ ೨೪ ರಿಂದ ಡಿಸೆಂಬರ್ ೯ ರವರೆಗಿನ ೧೪ ದಿನಗಳು ಆಶಾ ಕರ‍್ಯರ‍್ತರು ಮತ್ತು ಸ್ವಯಂ ಸೇವಕರು ಮನೆ ಮನೆಗಳಿಗೆ ಭೇಟಿ ನೀಡಿ ರೋಗದ ಚಿಹ್ನೆಗಳನ್ನು ಪರೀಕ್ಷಿಸಿ ಆರೋಗ್ಯ ಶಿಕ್ಷಣ ಮತ್ತು ಜಾಗೃತಿ ಮೂಡಿಸುವ ಕರ‍್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಶಿ ಕಿರಣ್ ಚಾಲನೆ ನೀಡಿದರು.
ಸಭೆಯಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ. ಶ್ರೀನಾಥ್ ಮಾತನಾಡಿ, ಕಳೆದ ೫ ರ‍್ಷಗಳ ಹಿಂದಿನ ರೋಗ ಪ್ರಕರಣಗಳು ಕಂಡು ಬಂದಿರುವ ಮಡಿಕೇರಿ ತಾಲೂಕಿನ ಆಯ್ದ ಗ್ರಾಮಗಳಾದ ಗಾಳಿಬೀಡು ಮತ್ತು ಪೆರಾಜೆ ಗ್ರಾಮಗಳಲ್ಲಿ ೧೪ ದಿನಗಳ ರ‍್ವೇಕ್ಷಣಾ ಕರ‍್ಯಾಚರಣೆ ಹಮ್ಮಿಕೊಂಡಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿಯವರು ಕ್ಷೇತ್ರ ಭೇಟಿ ನೀಡಿ ಶಂಕಿತ ಕುಷ್ಠರೋಗ ಪ್ರಕರಣಗಳನ್ನು ಗುರುತಿಸಲು ಮನೆ ಮನೆಗಳಿಗೆ ಆಶಾ ಕರ‍್ಯರ‍್ತರು ಬರುವ ಸಮಯದಲ್ಲಿ ಸಹಕಾರ ನೀಡುವಂತೆ ಕೋರಿದರು.
ರ‍್ಮದ ಮೇಲಿನ ಯಾವುದೇ ತಿಳಿ, ಬಿಳಿ, ತಾಮ್ರ ಬಣ್ಣದ ಮಚ್ಚೆ ಮತ್ತು ದಪ್ಪನಾದ ಎಣ್ಣಿ ಪಸರಿಸಿದಂತಹ ಚಿಹ್ನೆಗಳಿರುವ ಕುಷ್ಠರೋಗ ದಂತಹ ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ಸರ‍್ವಜನಿಕರು ಇಲಾಖೆಯೊಂದಿಗೆ ಕೈಜೋಡಿಸಿ ಕುಷ್ಠರೋಗ ಮುಕ್ತ ಭಾರತ ಮತ್ತು ಆರೋಗ್ಯಕರ ಸ್ವಸ್ಥ ಸಮಾಜಕ್ಕೆ ಸಹಕಾರ ನೀಡುವಂತೆ ಕರೆ ನೀಡಿದರು.
ಹೆಚ್ಚಿನ ಮಾಹಿತಿಗೆ ೧೦೪ ಸಂಖ್ಯೆಗೆ ಉಚಿತ ದೂರವಾಣಿ ಕರೆ ಮಾಡಲು ತಿಳಿಸಿದರು. ಈ ವೇಳೆ ಜಿಲ್ಲಾ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶ್ರೀನಿವಾಸ್ ಎ.ಎಂ., ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿಗಳ ಕಚೇರಿ ಧನು ಹಾಗೂ ಗ್ರಾಮ ಪಂಚಾಯಿತಿ ಸದಸ್ಯೆ ಉಷಾ ಬಿ.ಜಿ., ಸಮುದಾಯ ಆರೋಗ್ಯ ಅಧಿಕಾರಿ ರಮ್ಯ, ಆಶಾ ಕರ‍್ಯರ‍್ತೆ ಸೌಭಾಗ್ಯ, ನಳಿನಿ ಅವರು ಹಾಜರಿದ್ದರು.