ಸೋಮವಾರಪೇಟೆ, ನ. ೨೬: ತಾಲೂಕಿನ ಐಗೂರು ಸರಕಾರಿ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ಹಳೆಯ ವಿದ್ಯಾರ್ಥಿಗಳ ಸಂಘಕ್ಕೆ ಚಾಲನೆ ನೀಡಲಾಯಿತು.
ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಯೋಗೇಶ್ ಅವರ ಅಧ್ಯಕ್ಷತೆಯಲ್ಲಿ ನೂತನ ಸಮಿತಿ ರಚಿಸಲಾಯಿತು. ಈ ಸಂದರ್ಭ ಮಾತನಾಡಿದ ಯೋಗೇಶ್, ಹಳೆಯ ವಿದ್ಯಾರ್ಥಿಗಳ ಸಂಘ ರಚನೆಯಾಗುತ್ತಿರುವುದರಿಂದ ಶಾಲೆ ಮತ್ತು ಕಾಲೇಜಿನ ಅಭಿವೃದ್ಧಿಗೂ ಹೆಚ್ಚಿನ ಸಹಕಾರಿಯಾಗಲಿದೆ. ಇನ್ನಷ್ಟು ಸಮಾಜಮುಖಿ ಕೆಲಸಗಳನ್ನು ಮಾಡಲು ಸಾಧ್ಯವಿದೆ. ಇದುವರೆಗೆ ಪ್ರೌಢಶಾಲೆ ಮತ್ತು ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಸಂಘದ ಸದಸ್ಯತ್ವ ಪಡೆಯಬಹುದಾಗಿದೆ ಎಂದರು.
ಈ ಸಂದರ್ಭ ಕಾಲೇಜು ಪ್ರಾಂಶುಪಾಲ ಹೆಚ್.ಕೆ. ಉಮೇಶ್ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕ ಎಂ.ಎA. ಯಶ್‌ವಂತ್‌ಕುಮಾರ್ ಇದ್ದರು. ಹಳೆಯ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಐಗೂರು ರಾಜೇಶ್, ಉಪಾಧ್ಯಕ್ಷರಾಗಿ ಕುಂಬೂರು ಸುರೇಶ್, ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್ ಆರ್.ಎಂ. ಹಾಗೂ ಸಹ ಕಾರ್ಯದರ್ಶಿಗಳಾಗಿ ಅಬ್ದುಲ್ ಸಲಾಂ ಮತ್ತು ಸುನಂದ, ಖಜಾಂಚಿಯಾಗಿ ಪ್ರವೀಣ್ ಡಿಸೋಜ ಅವರುಗಳನ್ನು ಆಯ್ಕೆ ಮಾಡಲಾಯಿತು.
ಸದಸ್ಯತ್ವದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊ.೯೪೮೦೯೦೬೧೦೧ ಅಥವಾ ೯೬೩೨೦೨೧೬೦೬ ನ್ನು ಸಂಪರ್ಕಿಸಬಹುದಾಗಿದೆ.