ವೀರಾಜಪೇಟೆ, ನ. ೨೮: ಕ್ರಿಸ್ಮಸ್ ಹಬ,್ಬ ಋತುವಿನ ಸಂತೋಷ ಮತ್ತು ಸದ್ಭಾವನೆಯನ್ನು ಆಚರಿಸಲು, ಕ್ಯಾರೋಲ್ಗಳ ಮೂಲಕ ಪ್ರೀತಿ, ಶಾಂತಿ ಮತ್ತು ಏಕತೆಯ ಸಂದೇಶಗಳನ್ನು ಹರಡಲು ಸ್ಪರ್ಧೆಯನ್ನು ನಡೆಸಲಾಗುತ್ತಿದೆ ಎಂದು ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ವೀರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕು ಘಟಕದ ಅಧ್ಯಕ್ಷ ಆಂಟೋನಿ ರಾಬಿನ್ ಹೇಳಿದರು.

ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ವೀರಾಜಪೇಟೆ ಘಟಕ ಹಾಗೂ ವೀರಾಜಪೇಟೆ ಸಂತ ಅನ್ನಮ್ಮ ದೇವಾಲಯ ಸಹಯೋಗದೊಂದಿಗೆ ಏರ್ಪಡಿಸಲಾಗಿರುವ ಕ್ರಿಸ್ಮಸ್ ಗಾನ ತರಂಗ- ೨೦೨೫ ಕ್ರಿಸ್ಮಸ್ ಗಾಯನ ಸ್ಪರ್ಧೆಯ ಪೋಸ್ಟರ್‌ನ್ನು ಬಿಡುಗಡೆಗೊಳಿಸಿ ಮಾತನಾಡಿದ ತಾಲೂಕು ಅಧ್ಯಕ್ಷ ಆಂಟೋನಿ ರಾಬಿನ್ ಅವರು ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ವೀರಾಜಪೇಟೆ ತಾಲೂಕು ಘಟಕ ಹಾಗೂ ಸಂತ ಅನ್ನಮ್ಮ ದೇವಾಲಯದ ಸಹಯೋಗದೊಂದಿಗೆ ಕ್ರಿಸ್ಮಸ್ ಗಾನ ತರಂಗ ೨೦೨೫ ಕ್ರಿಸ್ಮಸ್ ಗಾಯನ ಸ್ಪರ್ಧೆಯನ್ನು ಡಿ.೭ರಂದು ವೀರಾಜಪೇಟೆಯ ಸಂತ ಅನ್ನಮ್ಮ ದೇವಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸ್ಪರ್ಧೆಯು ಕ್ರಿಸ್ಮಸ್ ಹಬ್ಬದ ಸಂದೇಶವಾದ ಶಾಂತಿ ಮತ್ತು ಪ್ರೀತಿಯನ್ನು ಹಂಚಿಕೊಳ್ಳುವ ಒಂದು ಉತ್ತಮ ವೇದಿಕೆಯಾಗಿದೆ. ಹದಿನೈದು ವರ್ಷಗಳಿಂದ ಸಮುದಾಯದ ಒಗ್ಗಟ್ಟಿಗೆ ಹಾಗೂ ನಮ್ಮ ಸಂಸ್ಕೃತಿಯ ಆಚರಣೆಯಲ್ಲಿ ತೊಡಗಿಸಿಕೊಳ್ಳಲು ಈ ಸಂಸ್ಥೆ ಶ್ರಮಿಸುತ್ತಿದೆ. ಕಳೆದ ಮೂರು ವರ್ಷಗಳಿಂದ ಕ್ರಿಸ್‌ಮಸ್ ಗಾಯನ ಸ್ಫರ್ಧೆಯನ್ನು ಆಯೋಜಿಸಿಕೊಂಡು ಬರುತ್ತಿದ್ದೇವೆ. ಸಮುದಾಯದ ಐಕ್ಯತೆ, ಚರ್ಚ್ ಕಾನ್ವೆಂಟ್‌ಗಳಲ್ಲಿರುವ ಮಕ್ಕಳು, ವಿದ್ಯಾರ್ಥಿಗಳಿಗೆ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡು ಬರುತ್ತಿದ್ದೇವೆ. ಈ ಕಾರ್ಯಕ್ರಮ ನಡೆಸಲು ನಮಗೆ ಧರ್ಮಕೇಂದ್ರ ಹಾಗೂ ವಿದ್ಯಾಸಂಸ್ಥೆಗಳ ಬೆಂಬಲ ಇದೆ ಎಂದರು.

ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಉಪಾಧ್ಯಕ್ಷ ಜೋಕಿಂ ರಾಡ್ರಿಗಸ್ ಮಾತನಾಡಿ, ಗಾನ ತರಂಗ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲೆಯ ಎಲ್ಲಾ ಧರ್ಮ ಕೇಂದ್ರದ ಗುರುಗಳು ಸೇರಿದಂತೆ ಜನಾಂಗ ಭಾಂದವರು ಒಟ್ಟಾಗಿ ಸೇರಲಿದ್ದೇವೆ. ಕ್ರೆöÊಸ್ತರೆಲ್ಲ ಒಂದೇ ಎನ್ನುವ ಭಾವೈಕ್ಯತೆ ಮೂಡಬೇಕು ಎನ್ನುವ ನಿಟ್ಟಿನಲ್ಲಿ ನಾವೆಲ್ಲರೂ ಒಂದೆಡೆ ಸೇರಲು ಇದು ವೇದಿಕೆಯಾಗಲಿದೆ ಎಂದರು.

ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮರ್ವಿನ್ ಲೋಬೋ ಮಾತನಾಡಿ, ಪ್ರತಿಭಾವಂತರಿಗೆ ಒಳ್ಳೆಯ ವೇದಿಕೆಯಾಗಲಿದ್ದು, ಎಲೆಮರೆಯ ಕಾಯಿಯಂತಿರುವ ಪ್ರತಿಭೆಗಳಿಗೆ ಅವಕಾಶ ಒದಗಿಸಿದಂತಾಗುತ್ತದೆ. ನಮ್ಮ ಕಾರ್ಯಕ್ರಮಕ್ಕೆ ಮೈಸೂರು ಧರ್ಮ ಪ್ರಾಂತ್ಯದ ಬಿಷಪ್ ಫ್ರಾನ್ಸಿಸ್ ಸೆರಾವೋ ಆಗಮಿಸುತ್ತಾರೆ ಎಂದರು.

ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ತಾಲೂಕು ಉಪಾಧ್ಯಕ್ಷ ಆಂತೋನಿ ಜೋಸೆಫ್ ಮಾತನಾಡಿ, ದಿನಂಪ್ರತಿ ಬೆಳಿಗ್ಗೆ ನಡೆಯುವ ಪೂಜೆಯನ್ನು ೮ ಗಂಟೆಗೆ ನಡೆಸಲಾಗುತ್ತದೆ. ಬೆಳಗ್ಗಿನ ಉಪಹಾರದ ಬಳಿಕ ಗಾನ ತರಂಗ ಕಾರ್ಯಕ್ರಮ ಪ್ರಾರಂಭವಾಗಿ ಸಂಜೆ ಸಮಾರೋಪಗೊಳ್ಳಲಿದೆ ಎಂದರು. ಕಾರ್ಯದರ್ಶಿ ಸ್ಟಾಲಿನ್ ಮಾತನಾಡಿ, ಎಲ್ಲರೂ ಒಂದೆಡೆ ಸೇರಲು ಉತ್ತಮ ಅವಕಾಶವಾಗಿದ್ದು, ಹಾಡುಗಾರರು ಇದರ ಸದುಪಯೋಗ ಪಡೆದುಕೊಳ್ಳುವಂತಾಗಬೇಕು. ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಕಾರ್ಯಕ್ರಮ ನಡೆಸಲು ಇದು ಪ್ರೇರಣೆಯಾಗಬೇಕು ಎಂದರು. ಈ ಸಂದರ್ಭ ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು.