ಗೋಣಿಕೊಪ್ಪಲು, ನ. ೨೮: ಯುವ ಸಮುದಾಯ ದುಶ್ಚಟಗಳಿಗೆ ಬಲಿಯಾದಲ್ಲಿ ಜೀವನದಲ್ಲಿ ಅತ್ಯಂತ ಕಠಿಣ ದಿನಗಳನ್ನು ಎದುರಿಸಬೇಕಾಗುತ್ತದೆ ಎಂದು ಕೊಡಗು ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶುಭ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಗೋಣಿಕೊಪ್ಪ ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾವೇರಿ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣಮಟ್ಟ ಬೆಳೆಯುತ್ತಿದ್ದರೂ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿರು ವುದು ಆತಂಕಾರಿ ಬೆಳವಣಿಗೆ ಎಂದ ಅವರು, ಮೊಬೈಲ್‌ಗಳ ಬಳಕೆ ಹೆಚ್ಚಾಗುತ್ತಿದ್ದಂತೆ ಸೈಬರ್ ಅಪರಾಧಗಳು ಅಧಿಕವಾಗುತ್ತಿದೆ. ಮಹಿಳೆಯರನ್ನು ಹೆಚ್ಚು ಕಾಡಲು ಪ್ರಾರಂಭಿಸಿದೆ. ವಿದ್ಯಾರ್ಥಿಗಳು ಒಳ್ಳೆಯದು ಮತ್ತು ಕೆಟ್ಟದು ಎಂಬುದನ್ನು ವಿಮರ್ಶೆ ಮಾಡುವಷ್ಟರ ಮಟ್ಟಿಗೆ ಗುಣಗಳನ್ನು ಬೆಳೆಸಿಕೊಳ್ಳಬೇಕು. ಕೆಟ್ಟ ಗುಣ ಮತ್ತು ನಡೆಗಳ ಕಡೆ ವಿದ್ಯಾರ್ಥಿಗಳು ಗಮನ ಹರಿಸದೆ ಸ್ವಚ್ಛಂದ ಮನಸ್ಥಿತಿಯನ್ನು ಹೊಂದಬೇಕು ಎಂದು ಸಲಹೆ ನೀಡಿದರು. ಕಾನೂನು ಅರಿವು ಇಲ್ಲದೆ ಇರುವುದರಿಂದ ಪೋಸ್ಕೋ ಘಟನೆಗಳಿಂದ ಸಾಕಷ್ಟು ಅಮಾಯಕ ಯುವಕರು ಜೈಲು ಸೇರಿದ್ದಾರೆ. ಇಂತಹವುಗಳಿAದ ದೂರ ಇರುವಂತೆ ನ್ಯಾಯಾಧೀಶರು ತಿಳಿ ಹೇಳಿದರು. ಮತ್ತೋರ್ವ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮೈಸೂರು ಜಿಲ್ಲಾ ಸಿವಿಲ್ ನ್ಯಾಯಾಧೀಶೆ ಎ.ಜಿ. ಶಿಲ್ಪ ಮಾತನಾಡಿ, ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯನ್ನು ತಿಳಿದು ಉತ್ತಮ ಸಮಾಜ ಕಟ್ಟುವ ನಿಟ್ಟಿನಲ್ಲಿ ಕನಸುಗಳನ್ನು ಕಾಣಬೇಕು. ಮಾದಕ ವ್ಯಸನಗಳಿಗೆ ಬಲಿಯಾಗಿ ಜೀವನ ಕಳೆದುಕೊಳ್ಳುವ ವ್ಯವಸ್ಥೆಗೆ ಬಲಿಯಾಗದೆ, ದೃಢ ಮನಸ್ಸು ಆತ್ಮವಿಶ್ವಾಸದಿಂದ ಮುಂದುವರಿಯುವAತೆ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
ಗೋಣಿಕೊಪ್ಪ ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ಅಧ್ಯಕ್ಷ ಬಿ.ಎನ್. ಪ್ರಕಾಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಭವ್ಯ ಭಾರತ ಭವಿಷ್ಯ ಭಾರತದ ಕನಸುಗಳನ್ನು ಕಟ್ಟಿಕೊಳ್ಳುವ ಮೂಲಕ ಸಮಾಜವನ್ನು ಸರಿದಾರಿಗೆ ತರುವ ಪ್ರಯತ್ನದೊಂದಿಗೆ ಜೀವನವನ್ನು ಮುಡಿಪಾಗೀಡಬೇಕು ಎಂದು ಸಲಹೆ ನೀಡಿದರು. ಕಾವೇರಿ ಪದವಿ ಕಾಲೇಜು, ಪ್ರಾಂಶುಪಾಲ, ಡಾ. ಎಂ.ಬಿ. ಕಾವೇರಪ್ಪ, ವಕೀಲರುಗಳಾದ ಕೆ.ಬಿ. ಸಂಜೀವ್, ಎಂ.ಎಸ್. ಕಾಶಿಯಪ್ಪ, ಸೀನಿಯರ್ ಚೇಂಬರ್ ಕಾರ್ಯದರ್ಶಿ ಎಂ.ಜಿ. ನಾಗೇಶ್ ವರ್ಣೇಕರ್ ಸೇರಿದಂತೆ ಎನ್.ಸಿ.ಸಿ. ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.