ಸಿದ್ದಾಪುರ, ನ. ೨೮: ರಾಜ್ಯ ಸರ್ಕಾರದ ರೋಡ್ ಸೇಫ್ಟಿ ಅನುದಾನದಲ್ಲಿ ರೂ ೨ ಕೋಟಿ ವೆಚ್ಚದಲ್ಲಿ ಅಭ್ಯತ್ ಮಂಗಲ -ಒಂಟಿಯAಗಡಿ ಗ್ರಾಮದ ಸೇತುವೆ ಹಾಗೂ ರಸ್ತೆ ಅಗಲೀಕರಣ ಕಾಮಗಾರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು.

ಲೋಕೋಪಯೋಗಿ ಇಲಾಖೆ ವತಿಯಿಂದ ಕಾಮಗಾರಿ ನಡೆಯಲಿದ್ದು, ರಾಜ್ಯ ಹೆದ್ದಾರಿಯಲ್ಲಿನ ಒಂಟಿಅAಗಡಿ ಕಿರು ಸೇತುವೆ ನಿರ್ಮಾಣ, ರಸ್ತೆ ಅಗಲೀಕರಣ, ವೃತ್ತ ನಿರ್ಮಾಣ, ಹೈಮಾಸ್ಟ್ ದೀಪ ಅಳವಡಿಕೆ ಹಾಗೂ ತೋಡಿಗೆ ತಡೆಗೋಡೆ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಶಾಸಕ ಮಂತರ್ ಗೌಡ ರಾಜ್ಯ ಸರ್ಕಾರವು ವಿವಿಧ ಯೋಜನೆ ಅಡಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಸಾಕಷ್ಟು ಅನುದಾನವನ್ನು ನೀಡುತ್ತಿದೆ ಎಂದರು. ಮೂರು ತಾಲೂಕು ಬೆಸೆಯುವ ಒಂಟಿ ಅಂಗಡಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ಈಗಾಗಲೇ ನೆಲ್ಲಿಹುದಿಕೇರಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿ ಇದೆ ಎಂದು ತಿಳಿಸಿದರು.

ವಾಲ್ನೂರು-ತ್ಯಾಗತ್ತೂರು ಗ್ರಾಮದ ಕಾಂಗ್ರೆಸ್ ಮುಖಂಡ ಮುಂಡ್ರುಮನೆ ಸುದೇಶ್ ಮಾತನಾಡಿ ಕಳೆದ ೨೦ ವರ್ಷಗಳಿಂದ ಈ ಭಾಗದ ರಸ್ತೆಗಳು ತೀವ್ರವಾಗಿ ಹದೆಗೆಟ್ಟಿದ್ದವು

ಇದೀಗ ಶಾಸಕ ಮಂತರ್ ಗೌಡ ಆಯ್ಕೆಯಾದ ಬಳಿಕ ವಾಲ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ರಸ್ತೆಗಳ ಅಭಿವೃದ್ಧಿ ಆಗುತ್ತಿರುವುದು ಸಂತಸ ತಂದಿದೆ ಎಂದರು. ಕಾರ್ಯಕ್ರಮದಲ್ಲಿ ಕುಶಾಲನಗರ ಗ್ಯಾರಂಟಿ ಯೋಜನೆಯ ಅಧ್ಯಕ್ಷ ವಿಪಿ ಶಶಿಧರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ, ಗ್ರಾಮ ಆಡಳಿತ ಅಧಿಕಾರಿ ಸಚಿನ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಹಾಗೂ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಪ್ರಮುಖರು ಹಾಜರಿದ್ದರು.