ಮಡಿಕೇರಿ, ನ. ೨೯: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮಡಿಕೇರಿ, ಸಹಕಾರ ಇಲಾಖೆ, ಕೊಡಗು ಜಿಲ್ಲೆ, ದೇವಣಗೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ೭೨ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಪ್ರವಾಸೋದ್ಯಮ, ಆರೋಗ್ಯ, ಹಸಿರು ಇಂಧನ, ಪ್ಲಾಟ್‌ಫಾರಂ ಸಹಕಾರಿ ಸಂಸ್ಥೆಗಳು, ಕಿಚನ್ ಸಹಕಾರ ಸಂಘಗಳು ಮತ್ತಿತರ ಉದಯೋನ್ಮುಖ ಸಹಕಾರ ಸಂಘಗಳನ್ನು ಅನುಕೂಲಕರ ಪ್ರದೇಶಗಳಿಗೆ ವಿಸ್ತರಣೆ ದಿನಾಚರಣೆಯನ್ನು ದೇವಣಗೇರಿ ಪ್ಯಾಕ್ಸ್ನ ಸಭಾಂಗಣದಲ್ಲಿ ಏರ್ಪಡಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಿ.ಯು. ರಾಬಿನ್ ದೇವಯ್ಯ ಅವರು, ೧೯೦೫ ರಲ್ಲಿ ಗದಗಿನ ಕಣಗಿನಹಾಳ ಗ್ರಾಮದಲ್ಲಿ ಶಿದ್ದನಗೌಡ ರಾಮನಗೌಡ ಪಾಟೀಲರು ಪ್ರಪ್ರಥಮ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸುವುದರ ಮೂಲಕ ಪ್ರಾರಂಭಗೊAಡ ಕ್ರಾಂತಿ ಇಂದು ಎಲ್ಲಾ ವಿಧದ ಸಹಕಾರ ಸಂಘವನ್ನು ಸ್ಥಾಪಿಸುವಷ್ಟರ ಮಟ್ಟಿಗೆ ಬೆಳೆದಿದೆ.
ಕೊಡಗು ಜಿಲ್ಲೆಯೂ ಸಹಕಾರ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು ೧೯೦೫ ರಲ್ಲಿಯೇ ಶಾಂತಳ್ಳಿಯ ತಲ್ತರೆ ಶೆಟ್ಟಳ್ಳಿಯಲ್ಲಿ ಪ್ರಥಮ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸಿ ರೈತರ ಹಾಗೂ ಬಡವರ ಏಳಿಗೆಗಾಗಿ ಶ್ರಮಿಸಲಾಯಿತು.
ತದನಂತರದಲ್ಲಿ ಜಿಲ್ಲೆಯಲ್ಲಿ ಸಹಕಾರ ದವಸ ಭಂಡಾರಗಳು, ಮಹಿಳಾ ಸಹಕಾರ ಸಂಘಗಳು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಕಾಫಿ, ಏಲಕ್ಕಿ, ಜೇನು, ಕಿತ್ತಳೆ ಬೆಳೆಗಾರರ ಸಹಕಾರ ಸಂಘಗಳು ಸ್ಥಾಪಿಸುವುದರ ಮೂಲಕ ಸಹಕಾರ ಕ್ಷೇತ್ರದ ಅಭಿವೃದ್ಧಿ, ಬೆಳವಣಿಗೆಗೆ ಕಾಣಿಕೆ ನೀಡಿದೆ. ಇವುಗಳೆಲ್ಲವೂ ರೈತರ ಸ್ಥಳೀಯ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ನಮ್ಮ ಪೂರ್ವಜರು ಚಿಂತಿಸಿ ಸಂಘಗಳನ್ನು ಸ್ಥಾಪಿಸಿದರು.
ದೇಶದ ಪ್ರಧಾನಮಂತ್ರಿಗಳು ನಮ್ಮ ಸ್ಥಳೀಯ ಉತ್ಪನ್ನಗಳನ್ನು ಉತ್ಪಾದಿಸಲು, ಮಾರುಕಟ್ಟೆ ಒದಗಿಸಲು ಹಲವು ರೀತಿಯಲ್ಲಿ ನೆರವನ್ನು ನೀಡುತ್ತಾ ‘ಆತ್ಮ ನಿರ್ಭರ ಭಾರತ’ ಎಂಬ ಘೋಷಣೆಯೊಂದಿಗೆ ಹಲವು ಮುಂದುವರೆದ ದೇಶಗಳಿಗೆ ಪೈಪೋಟಿಯನ್ನು ನೀಡುತ್ತಿದೆ.
ಅಂತೆಯೇ ನಮ್ಮ ಪೂರ್ವಿಕರು ಸ್ಥಾಪಿಸಿದಂತಹ ಸಂಘ, ಅವುಗಳ ಉದ್ದೇಶಗಳನ್ನು ನಾವು ಮನಸ್ಸಿನಲ್ಲಿಟ್ಟುಕೊಂಡು ಪಾರದರ್ಶಕತೆಯಿಂದ ಸಂಘದ ವ್ಯವಹಾರವನ್ನು ಕೈಗೊಳ್ಳುವುದರ ಮೂಲಕ ಸಂಘಗಳನ್ನು ನಮ್ಮ ಮುಂದಿನ ಪೀಳಿಗೆಗೆ ಉಳಿಸಿ-ಬೆಳೆಸುವಂತಹ ಕಾರ್ಯಕೈಗೊಳ್ಳಬೇಕಿದೆ ಎಂದು ಹೇಳಿದರು.
ಸಂಘದ ಹಿರಿಯ ಸಹಕಾರಿಗಳಾದ ಚೇಂದAಡ ಜಿ. ಪೊನ್ನಪ್ಪ, ಐಚೆಟ್ಟಿರ ಸಿ. ಅಪ್ಪಚ್ಚು, ಚಾರಿಮಂಡ ಬಿ. ಪೂಣಚ್ಚ, ಮಂಡೇಪAಡ ಸುಮಿತ್ರ ಪಾರ್ವತಿ, ಮೂಕೊಂಡ ಎಸ್. ಬೋಪಣ್ಣ ಅವರುಗಳನ್ನು ಸನ್ಮಾನಿಸಿ ಮಾತನಾಡಿದ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಕೆ.ಪಿ. ಗಣಪತಿ, ಸಹಕಾರ ಧ್ವಜದ ಬಣ್ಣಗಳ ವಿಶೇಷತೆ, ತತ್ವಗಳ ಬಗ್ಗೆ ವಿವರಿಸುತ್ತಾ, ಪ್ರತಿಯೊಂದು ಸಹಕಾರ ಸಂಘದಲ್ಲಿ ಸದಸ್ಯರ ಪಾಲ್ಗೊಳ್ಳುವಿಕೆ ಅತಿ ಮುಖ್ಯ. ಸದಸ್ಯರ ಪಾಲ್ಗೊಳ್ಳುವಿಕೆ ಉತ್ತಮವಾಗಿದ್ದಲ್ಲಿ ಸಂಘವು ಅವರ ಅಗತ್ಯಕ್ಕೆ ತಕ್ಕಂತೆ ಹಲವು ವಿಧದ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಕ್ರಮ ಕೈಗೊಳ್ಳಬಹುದಾಗಿದೆ.
ಸದಸ್ಯರಿಗೆ ವಾಹನ, ಕಾಫಿ ಕಣ, ಯಂತ್ರೋಪಕರಣ ಖರೀದಿಗಳಿಗೆ ಸಾಲ ನೀಡುತ್ತಾ ವಾಣಿಜ್ಯ ಬ್ಯಾಂಕ್‌ಗಳಿಗೆ ಪೈಪೋಟಿ ನೀಡುತ್ತಿವೆ. ಜಿಲ್ಲೆಯ ಪ್ಯಾಕ್ಸ್ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ವಾರ್ಷಿಕ ೧೦೦-೨೦೦ ಕೋಟಿವರೆಗೆ ಸಾಲ ನೀಡುತ್ತಿವೆ. ಸಂಘಗಳು ಸಹಕಾರ ಆಸ್ಪತ್ರೆ, ಪೆಟ್ರೋಲ್ ಬಂಕ್, ಕಾಫಿ ತೋಟಗಳನ್ನು ಹೊಂದಿರುವುದರಿAದ ಅವುಗಳ ಬೆಳವಣಿಗೆಗೆ ಸಹಕಾರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದೇವಣಗೇರಿ ಪ್ಯಾಕ್ಸ್ನ ಅಧ್ಯಕ್ಷರಾದ ಶಶಿ ಸುಬ್ರಮಣಿ ಅವರು ಮಾತನಾಡಿ, ಪ್ರತಿಯೊಂದು ಸಂಘವು ತಮ್ಮ ಸದಸ್ಯರಿಗೆ ಅವರ ಬೇಡಿಕೆಗನುಗುಣವಾಗಿ ಸ್ಪಂದಿಸುವ ಗುಣ ಬೆಳೆಸಿಕೊಳ್ಳಬೇಕು. ಅವರ ಸಾಲದ ಅವಶ್ಯಕತೆ, ತುರ್ತು ಪರಿಸ್ಥಿತಿಗಳನ್ನು ಮನವರಿಕೆ ಮಾಡಿಕೊಂಡು ಕಡಿಮೆ ಅವಧಿಯಲ್ಲಿ ಹಾಗೂ ಕಡಿಮೆ ದಾಖಲಾತಿಗಳನ್ನು ಪಡೆದುಕೊಳ್ಳುವುದರ ಮೂಲಕ ನಾವು ಸಾಲ ನೀಡುವಂತಾಗಬೇಕು ಎಂದು ತಿಳಿಸಿದರು.
ಪ್ರವಾಸೋದ್ಯಮ, ಆರೋಗ್ಯ, ಹಸಿರು ಇಂಧನ, ಪ್ಲಾಟ್‌ಫಾರಂ ಸಹಕಾರಿ ಸಂಸ್ಥೆಗಳು, ಕಿಚನ್ ಸಹಕಾರ ಸಂಘಗಳು ಮತ್ತಿತರ ಉದಯೋನ್ಮುಖ ಸಹಕಾರ ಸಂಘಗಳನ್ನು ಅನುಕೂಲಕರ ಪ್ರದೇಶಗಳಿಗೆ ವಿಸ್ತರಣೆ ವಿಷಯದ ಕುರಿತು ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ನ ನಿರ್ದೇಶಕರು ಹಾಗೂ ಕೆ.ಐ.ಸಿ.ಎಂ.ನ ನಿವೃತ್ತ ಪ್ರಾಂಶುಪಾಲೆ ಎಂ.ಎA. ಶ್ಯಾಮಲಾ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಎ.ಎಸ್. ಶ್ಯಾಂಚAದ್ರ, ಎ.ಸಿ. ಕುಶಾಲಪ್ಪ, ಎಂ.ಟಿ. ಸುಬ್ಬಯ್ಯ, ಎಸ್.ಆರ್. ಸುನಿಲ್ ರಾವ್, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕರಾದ ಹೆಚ್.ಎಂ. ರಮೇಶ್, ಪಿ.ಪಿ. ಪೆಮ್ಮಯ್ಯ, ಜಿ.ಎಸ್. ಕಿಲನ್ ಗಣಪತಿ, ಪಿ.ಬಿ. ರಘು ನಾಣಯ್ಯ, ದೇವಣಗೇರಿ ಸಹಕಾರ ದವಸ ಭಂಡಾರದ ಅಧ್ಯಕ್ಷ ಪಿ.ಕೆ. ದೇವಯ್ಯ, ಚೆಂಬೆಬೆಳ್ಳೂರು ಸಹಕಾರ ದವಸ ಭಂಡಾರದ ಅಧ್ಯಕ್ಷ ಸಿ.ಪಿ. ನವೀನ್ ಹಾಗೂ ವೀರಾಜಪೇಟೆ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಉಪಸ್ಥಿತರಿದ್ದರು.
ದೇವಣಗೇರಿ ಪ್ಯಾಕ್ಸ್ನ ಉಪಾಧ್ಯಕ್ಷ ನಂದಾ ನಾಚಪ್ಪ ಪ್ರಾರ್ಥಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ್ ಸ್ವಾಗತಿಸಿ, ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ನಿರೂಪಿಸಿದರು. ಕಾರ್ಯಕ್ರಮ ನಿರ್ವಹಣೆಗೆ ದೇವಣಗೇರಿ ಪ್ಯಾಕ್ಸ್ನ ಸಿಬ್ಬಂದಿಗಳು ಸಹಕರಿಸಿದರು.