ಮಡಿಕೇರಿ, ನ. ೨೯: ಚೆರಂಬಾಣೆಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಬೆಟ್ಟಗೇರಿ ಉದಯ ಶಾಲೆಯ ಮಕ್ಕಳು ಭಾಗವಹಿಸಿ ಸಾಧನೆ ಮಾಡಿದ್ದಾರೆ.

ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ೨೧ ವಿದ್ಯಾರ್ಥಿಗಳು ಪ್ರಥಮ ಸ್ಥಾನ, ೨೩ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಹಾಗೂ ೫ ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆಯುವುದರ ಮೂಲಕ ಒಟ್ಟು ೪೯ ವಿದ್ಯಾರ್ಥಿಗಳು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.