ಸೋಮವಾರಪೇಟೆ, ನ. ೨೯: ಸಮೀಪದ ಐಗೂರು ಸರಕಾರಿ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಂವಿಧಾನ ದಿನಾಚರಣೆಯ ಅಂಗವಾಗಿ ಜಿಲ್ಲೆಯ ಕಲಾಸಾಗರ ತಂಡದ ಈ. ರಾಜು ಮತ್ತು ಸಹ ಕಲಾವಿದರಿಂದ ಕಾಲೇಜು ಆವರಣದಲ್ಲಿ ಸಂವಿಧಾನ ಜಾಗೃತಿ ಮೂಡಿಸುವ ಬೀದಿ ನಾಟಕ ಪ್ರದರ್ಶನ ನಡೆಯಿತು. ಶಾಲೆಯ ಸಹಶಿಕ್ಷಕರು, ಕಾಲೇಜು ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.