ನಾಪೋಕ್ಲು, ನ. ೨೯: ಸಾರ್ವಜನಿಕರ ರಸ್ತೆ ಸಂಚಾರಕ್ಕೆ ತಡೆ ಒಡ್ಡಿ ವ್ಯಕ್ತಿಯೊಬ್ಬರು ಕಾನೂನು ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಸ್ಥಳೀಯರಾದ ಬಿದ್ದಾಟಂಡ ರೋಜಿ ಚಿಣ್ಣಪ್ಪ ಮತ್ತು ಮಮತಾ ಚಿಣ್ಣಪ್ಪ ಆರೋಪಿಸಿದ್ದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಹಾಗೂ ಸಂಬAಧಿಸಿದವರನ್ನು ಒತ್ತಾಯಿಸಿದ್ದಾರೆ.
ನಾಪೋಕ್ಲಿನಲ್ಲಿ ಶನಿವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿದ್ದಾಟ೦ಡ ರೋಜಿ ಚಿಣ್ಣಪ್ಪ ಅವರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದಿನಿ ಆಸ್ಪತ್ರೆ ಎದುರು ಹಾದುಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ನಾಲ್ಕು ಲಕ್ಷ ರೂ. ವೆಚ್ಚದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ ಅವರ ಅನುದಾನದಲ್ಲಿ ಪಂಚಾಯತ್ ರಾಜ್ ಇಂಜಿನಿಯರಿAಗ್ ಇಲಾಖೆಯ ಮೂಲಕ ಅನುಷ್ಠಾನಗೊಳಿಸಲಾಗಿತ್ತು. ಸದರಿ ರಸ್ತೆಗೆ ಅಡ್ಡಲಾಗಿ ಕಬ್ಬಿಣದ ರಾಡುಗಳನ್ನು ಬಳಸಿ ವಾಹನ ಸಂಚಾರಿಸದAತೆ ಅಡ್ಡಿಪಡಿಸಲಾಗಿರುವ ಕುರಿತು ಸಾರ್ವಜನಿ ಕರ ಆಕ್ರೋಶಕ್ಕೆ ಕಾರಣವಾಗಿದೆ ಎಂದರು.
ಪಟ್ಟಣದ ಮುಖ್ಯರಸ್ತೆಯಿಂದ ನಂದಿನಿ ಆಸ್ಪತ್ರೆ ಮತ್ತು ನಿವೃತ್ತ ಪ್ರಾಂಶುಪಾಲ ದಿ. ಬಿದ್ದಾಟಂಡ ಪೊನ್ನಪ್ಪ ಅವರ ಮನೆಗೆ ಸಂಪರ್ಕಿಸುವ ಸಾರ್ವಜನಿಕ ರಸ್ತೆ ಸಂಚಾರಕ್ಕೆ ದುರುದ್ದೇಶದಿಂದ ಅಡ್ಡಿಪಡಿಸಲಾಗುತ್ತಿದೆ. ರಾಜಕೀಯ ಮುಖಂಡ, ದೇವಸ್ಥಾನ ಸಮಿತಿ ಮಾಜಿ ಅಧ್ಯಕ್ಷ ಹೀಗೆ ಹಲವಾರು ಹುದ್ದೆಗಳನ್ನು ಅಲಂಕರಿಸುವ ವ್ಯಕ್ತಿ ದ್ವೇಷದಿಂದ ಈ ರೀತಿ ಸಾರ್ವಜನಿಕರಿಗೆ ತೊಂದರೆ ಮಾಡುತ್ತಿರುವುದು ಸರಿಯಲ್ಲ. ಮಾತ್ರವಲ್ಲದೆ ಈ ವ್ಯಕ್ತಿಗೆ ಈ ರಸ್ತೆಗೆ ಸಂಬAಧಿಸಿದAತೆ ಯಾವುದೇ ಜಾಗವಿಲ್ಲ ಎಂದು ತಿಳಿಸಿದರು.
ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಗ್ರಾಮ ಪಂಚಾಯಿತಿ ಕಂದಾಯ ಇಲಾಖೆ, ಪೊಲೀಸ್ ಇಲಾಖೆಗಳಿಗೆ ದೂರು ಸಲ್ಲಿಸಿದರು ಅಸಹಾಯಕರಂತೆ ವರ್ತಿಸುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.