ಮಡಿಕೇರಿ, ನ. ೨೯: ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ನಡೆಸುತ್ತಿರುವ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇವರುಗಳನ್ನು ಒಟ್ಟಿಗೆ ಬ್ರೇಕ್ ಫಾಸ್ಟ್ ಸಭೆ ನಡೆಸುವ ಜವಾಬ್ದಾರಿಯನ್ನು ಕಾಂಗ್ರೆಸ್ ಪಕ್ಷದ ವರಿಷ್ಠರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರ ಹೆಗಲಿಗೆ ಹಾಕಿದರು. ಕಾಂಗ್ರೆಸ್ ಪಕ್ಷದ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪೊನ್ನಣ್ಣ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಜವಾಬ್ದಾರಿಯನ್ನು ನೀಡಿದರು. ವೇಣುಗೋಪಾಲ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸಂಪರ್ಕಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ಉಪಹಾರ ಸೇವಿಸಲು ತೆರಳುವಂತೆ ಸೂಚಿಸಿದರು.

ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿಗಳನ್ನು ಸಂಪರ್ಕಿಸಿದ ಪೊನ್ನಣ್ಣ, ಮುಖ್ಯಮಂತ್ರಿಗಳ ನಿವಾಸಕ್ಕೆ ಆಗಮಿಸಿ ಉಪಹಾರ ಸೇವಿಸುವಂತೆ ಆಹ್ವಾನಿಸಿದರು.

ಪೊನ್ನಣ್ಣ ಅವರ ಉಪಸ್ಥಿತಿಯಲ್ಲಿ ಉಪಹಾರ ಸಭೆ ನಡೆದು ಆನಂತರ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಜಂಟಿಯಾಗಿ ಪತ್ರಿಕಾಗೋಷ್ಠಿ ನಡೆಸಿದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ಇಬ್ಬರೂ ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಿ ಸರ್ಕಾರದ ವಿರುದ್ಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ನಾವಿಬ್ಬರೂ ಪಕ್ಷದ ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ ಎಂದು ತೀರ್ಮಾನಿಸಿದ್ದೇವೆ. ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವ ಕೆಲಸ ಮಾಡಲು ಸೂಚಿಸಿದ್ದಾರೆ. ನಾಳೆಯಿಂದ ಯಾವುದೇ ಗೊಂದಲ ಇರುವುದಿಲ್ಲ. ಈಗಲೂ ಇಲ್ಲ. ನಮ್ಮ ನಡುವೆ ಆಗಿರುವ ಒಪ್ಪಂದದ ಬಗ್ಗೆ ಹೈಕಮಾಂಡಿಗೆ ಮಾಹಿತಿ ನೀಡಲಾಗುವುದು ಎಂದರು. ಆದರೆ ಗೊಂದಲ ಸೃಷ್ಟಿಯಾಗಿದೆ. ಕೆಲವು ಮಾಧ್ಯಮಗಳು ಇದನ್ನು ಸೃಷ್ಟಿಸಿದ್ದಾರೆ ಎಂದರು. ಕೆಲವು ಶಾಸಕರು ಸಚಿವ ಸಂಪುಟ ಪುನರ್ ರಚನೆಗೆ ಸಂಬAಧಿಸಿದAತೆ ದೆಹಲಿಗೆ ಭೇಟಿ ನೀಡಿರಬಹುದು. ಹಾಗೆಂದು ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಕೆಲವರು ಇಂಥ ಕಾರಣಕ್ಕೆ ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ ಎಂದರು.

ಉಪಹಾರ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಉಪಸ್ಥಿತರಿದ್ದರು ಎಂದು ಸಿಎಂ ಉಪಹಾರ ಸಭೆಯಲ್ಲಿ ಏನೂ ಮಾತನಾಡಿಲ್ಲ. ಡಿ.ಕೆ. ಶಿವಕುಮಾರ್ ಮತ್ತು ನಾನು ನಮ್ಮ ಮನೆಯಲ್ಲಿ ಒಟ್ಟಿಗೆ ಉಪಹಾರ ಸೇವಿಸಿದ್ದೇವೆ. ಪಕ್ಷದ ವರಿಷ್ಠರಾದ ವೇಣು ಗೋಪಾಲ್ ಅವರು ಪೊನ್ನಣ್ಣ ಅವರಿಗೆ ಕರೆ ಮಾಡಿ ಡಿ.ಕೆ. ಶಿವಕುಮಾರ್ ಅವರನ್ನು ಉಪಹಾರಕ್ಕೆ ಕರೆಯಲು ಸೂಚಿಸಿದ್ದರು. ಡಿ.ಕೆ. ಶಿವಕುಮಾರ್ ಅವರಿಗೂ ಇದನ್ನೇ ತಿಳಿಸಿದರು. ಡಿ.ಕೆ. ಶಿವಕುಮಾರ್ ಅವರೇ, ನಮ್ಮ ಮನೆಗೆ ಊಟಕ್ಕೆ ಬನ್ನಿ ಎಂದು ಆಹ್ವಾನವಿತ್ತಿದ್ದರು. ಮತ್ತೊಂದು ದಿನ ಊಟಕ್ಕೆ ಬರೋಣ ಎಂದು ತಿಳಿಸಿ ನಮ್ಮ ಮನೆಗೇ ಉಪಾಹಾರಕ್ಕೆ ಕರೆದೆವು ಎಂದರು. ೨೦೨೮ ರಲ್ಲಿ ಕಾಂಗ್ರೆಸ್‌ನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ತೀರ್ಮಾನ: ಕಾರ್ಯತಂತ್ರಗಳ ಬಗ್ಗೆ ಚರ್ಚೆ ಇತ್ತೀಚಿನ ದಿನಗಳಲ್ಲಿ ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣವಾಗಿವೆ. ನಾವು ಈ ಬಗ್ಗೆ ಮಾತನಾಡಿದ್ದೇವೆ.