ವೀರಾಜಪೇಟೆ, ನ. ೨೯: ಸಮಾಜದಲ್ಲಿ ವಿದ್ಯಾರ್ಥಿಗಳು ಆರೋಗ್ಯ ಜಾಗೃತಿಯನ್ನು ಮೂಡಿಸುವುದರ ಜೊತೆಗೆ ಆರೋಗ್ಯವಂತ ಸಮಾಜವನ್ನು ನಿರ್ಮಿಸಬೇಕು ಎಂದು ಗೋಣಿಕೊಪ್ಪಲುವಿನ ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕ ಚಂದ್ರಶೇಖರ್ ಎನ್.ಸಿ. ಅಭಿಪ್ರಾಯಪಟ್ಟರು.
ವೀರಾಜಪೇಟೆ ಪಟ್ಟಣದ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ರೆಡ್ ರಿಬ್ಬನ್ ಕ್ಲಬ್, ಎನ್‌ಎಸ್‌ಎಸ್ ಘಟಕ ಹಾಗೂ ಯುವ ರೆಡ್‌ಕ್ರಾಸ್ ಘಟಕಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಹೆಚ್‌ಐವಿ, ಏಡ್ಸ್ ಅರಿವು ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ವಿದ್ಯಾರ್ಥಿಗಳು ಹೆಚ್‌ಐವಿ, ಏಡ್ಸ್ನ ಬಗ್ಗೆ ಸಮಾಜದಲ್ಲಿ ಜಾಗೃತಿಯನ್ನು ಮೂಡಿಸಬೇಕು. ಸಾರ್ವಜನಿಕರಲ್ಲಿ ಜಾಗೃತಿ ಮೂಡಿದಾಗ ಮಾತ್ರ ನಿಯಂತ್ರಣ ಸಂಪೂರ್ಣವಾಗಿ ಸಾಧ್ಯ. ೨೦೩೦ ರ ವೇಳೆಗೆ ಹೆಚ್‌ಐವಿಯನ್ನು ಸಂಪೂರ್ಣವಾಗಿ ನಿಯಂತ್ರಿಸುವ ಗುರಿ ಹೊಂದಲಾಗಿದ್ದು ರೆಡ್ ರಿಬ್ಬನ್ ಕ್ಲಬ್‌ಗಳ ಪಾತ್ರವು ಅದರಲ್ಲಿ ಬಹಳಷ್ಟಿದೆ. ಏಡ್ಸ್ ಮಾರಕ ಕಾಯಿಲೆ ಎಂಬುವುದಕ್ಕಿAತ ಅದರ ಜಾಗೃತಿ ಮೂಡಿದಾಗ ಮಾತ್ರ ನಿಯಂತ್ರಣ ಸಾಧ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಸ್ವಾಸ್ತ÷್ಯ ಸಮಾಜದ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ ಅಪಾರವಾಗಿದ್ದು ಯುವ ಜನತೆ ತಾವು ಶಿಕ್ಷಣವನ್ನು ಪಡೆದು ಸಮಾಜದಲ್ಲಿ ತಾವು ಕಲಿತದ್ದನ್ನು ಅರಿವು ಮೂಡಿಸಿ ಏಡ್ಸ್ ನಿಯಂತ್ರಣಕ್ಕೆ ಸರಕಾರ, ಆರೋಗ್ಯ ಇಲಾಖೆ ಪ್ರಯತ್ನವನ್ನು ಪಡುತ್ತಿದ್ದು ಸಾರ್ವಜನಿಕ ಜಾಗೃತಿ ಮೂಡಿಸಬೇಕಾದ ಕರ್ತವ್ಯ ಪ್ರತಿಯೊಬ್ಬರದ್ದಾಗಿದೆ ಎಂದು ಹೇಳಿದರು.
ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಹಾಗೂ ರೆಡ್ ರಿಬ್ಬನ್ ಕ್ಲಬ್‌ನ ಅಧಿಕಾರಿ ಬಿ.ಎನ್. ಶಾಂತಿಭೂಷಣ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ, ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಅಧಿಕಾರಿ ವಿಲೀನ ಗೋನ್ಸಾಲ್ವೇಸ್, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ರೆಡ್ ರಿಬ್ಬನ್ ಕ್ಲಬ್‌ನ ವತಿಯಿಂದ ವಿದ್ಯಾರ್ಥಿಗಳಿಗೆ ಹೆಚ್‌ಐವಿ, ಏಡ್ಸ್ ಕುರಿತು ಪೋಸ್ಟರ್ ಮೇಕಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿಜೇತ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನವನ್ನು ವಿತರಿಸಿದರು. ದ್ವಿತೀಯ ಬಿಬಿಎ ತಂಡ ಪ್ರಥಮ ಸ್ಥಾನ, ದ್ವಿತೀಯ ಬಿ.ಕಾಂ ತಂಡ ದ್ವಿತೀಯ ಸ್ಥಾನ ಹಾಗೂ ಪ್ರಥಮ ಬಿ.ಕಾಂ ತಂಡ ತೃತೀಯ ಬಹುಮಾನ ಪಡೆದುಕೊಂಡಿತು.