ಕುಶಾಲನಗರದಲ್ಲಿ ಡಿಸೆಂಬರ್ ೨ ರಂದು ಹನುಮ ಜಯಂತಿ ಸಂದರ್ಭ ರಾತ್ರಿ ವೇಳೆ ಕುಶಾಲನಗರ ಪುರಸಭೆ ವ್ಯಾಪ್ತಿಯ ಎಲ್ಲಾ ಹೋಟೆಲ್‌ಗಳನ್ನು ತೆರೆದು ಗ್ರಾಹಕರಿಗೆ ಅನುಕೂಲ ಕಲ್ಪಿಸಲು ಪುರಸಭೆ ವತಿಯಿಂದ ಅನುಮತಿ ನೀಡಲಾಗಿದೆ ಎಂದು ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಗಿರೀಶ್ ತಿಳಿಸಿದ್ದಾರೆ.

ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟಿçÃಸ್, ಹೊಟೇಲ್ ಮಾಲೀಕರೊಂದಿಗೆ ಕನ್ನಿಕಾ ಸಭಾಂಗಣದಲ್ಲಿ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಯಿತು. ತಾ.೨ರಂದು ಒಂದು ದಿನದ ಮಟ್ಟಿಗೆ ರಾತ್ರಿ ವೇಳೆ ಎಲ್ಲಾ ಹೊಟೇಲ್‌ಗಳನ್ನು ತೆರೆದು ವ್ಯಾಪಾರ ಮಾಡಲು ಅವಕಾಶ ಕಲ್ಪಿಸಲಾಗಿದೆ. ಅದೇ ದಿನ ಇತರ ವ್ಯಾಪಾರಿಗಳು ಕೂಡ ವ್ಯಾಪಾರ ಮಾಡಲು ಬಯಸಿದರೆ ಅಂತವರಿಗೆ ಪುರಸಭೆಯ ವಾಣಿಜ್ಯ ಕಟ್ಟಡದ ಮುಂಭಾಗದಲ್ಲಿ ಅವಕಾಶ ಕಲ್ಪಿಸಲಾಗುವುದು. ತಕ್ಷಣ ಅರ್ಜಿ ಸಲ್ಲಿಸಿ ಅನುಮತಿ ಪಡೆದುಕೊಳ್ಳುವಂತೆ ಪಂಚಾಯಿತಿ ಅಧಿಕಾರಿಗಳು ತಿಳಿಸಿದ್ದಾರೆ.

ಚೇಂಬರ್ ಅಧ್ಯಕ್ಷ ಕೆ.ಎಸ್. ನಾಗೇಶ್, ಜಿಲ್ಲಾ ಚೇಂಬರ್ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ಮಾತನಾಡಿ, ಹೊಟೇಲ್‌ಗಳಲ್ಲಿ ಗ್ರಾಹಕರಿಂದ ಅನಾವಶ್ಯಕ ಹೆಚ್ಚುವರಿ ದರ ಪಡೆಯದೆ ನಿಗದಿತ ದರದಲ್ಲಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಆಹಾರ ಒದಗಿಸುವಂತೆ ಕಿವಿಮಾತು ಹೇಳಿದರು.

ಪುರಸಭೆಯ ಆರೋಗ್ಯಾಧಿಕಾರಿ ಉದಯ್ ಕುಮಾರ್, ಚೇಂಬರ್‌ನ ಕಾರ್ಯದರ್ಶಿ ಚಿತ್ರ ರಮೇಶ್, ದಶಮಂಟಪ ಸಮಿತಿಯ ಅಧ್ಯಕ್ಷ ಎಂ.ಡಿ. ಕೃಷ್ಣಪ್ಪ, ಇತರರು ಇದ್ದರು.