ವೀರಾಜಪೇಟೆ, ನ. ೩೦: ಗ್ರಾಮಮಟ್ಟದಲ್ಲಿ ಎನ್.ಎಸ್.ಎಸ್ ಘಟಕಗಳು ಮಾಡುವಂತಹ ಸಮಾಜಮುಖಿ ಕಾರ್ಯಗಳು ಶ್ಲ್ಯಾಘನೀಯವಾಗಿವೆ ಎಂದು ಬೇಟೋಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಅಚ್ಚಪಂಡ ಎಂ. ಬೋಪಣ್ಣ ಅಭಿಪ್ರಾಯಪಟ್ಟರು. ಅವರು ಬೇಟೋಳಿ ಗ್ರಾಮ ಪಂಚಾಯತ್‌ನಲ್ಲಿ ವೀರಾಜಪೇಟೆಯ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕ, ಡಾ. ಅಗರ್ ವಾಲ್ಸ್ ಕ್ಲಿನಿಕ್ ಹಾಗೂ ವಿರಾಜಪೇಟೆಯ ಅಪೋಲೋ ಫಾರ್ಮಸಿ ಸಂಯುಕ್ತ ಆಶ್ರಯದಲ್ಲಿ ಪಂಚಾಯಿತಿಯಲ್ಲಿ ಜರುಗಿದ ಸಾರ್ವಜನಿಕರಿಗೆ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಗ್ರಾಮೀಣ ಭಾಗದಲ್ಲಿ ಜನರಿಗೆ ಸ್ವಚ್ಛತೆ, ಆರೋಗ್ಯದ ಕುರಿತು ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ. ವಿದ್ಯಾರ್ಥಿಗಳು ಗ್ರಾಮಮಟ್ಟದಲ್ಲಿ ಸಾಮಾಜಿಕ ಸೇವೆಯನ್ನು ಸಲ್ಲಿಸುತ್ತಿದ್ದು, ಇಂತಹ ಆರೋಗ್ಯ ಕೇಂದ್ರೀತ ಶಿಬಿರಗಳಿಂದ ಸಮಾಜಕ್ಕೆ ಅನುಕೂಲವಾಗುತ್ತದೆ ಹಾಗೂ ಸಾಮಾಜಿಕ ಜಾಗೃತಿ ಮೂಡಿಸಲು ಸಾಧ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕರಾದ ಮದಲೈ ಮುತ್ತು ರವರು ಮಾತನಾಡಿ, ಸಮಾಜಮುಖಿ ಕಾರ್ಯಗಳು ಸದಾ ಎಲ್ಲರ ಮನದಲ್ಲಿ ಹಚ್ಚಹಸಿರಾಗಿ ಉಳಿಯುತ್ತದೆ. ಸಮಾಜ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸುವುದರಿಂದ ವ್ಯಕ್ತಿಯು ಸಂತಸದಿAದ ಜೀವನ ನಡೆಸಲು ಸಾಧ್ಯ ಎಂದರು.

ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಇಂದು ಬೇಟೋಳಿ ಗ್ರಾಮ ಪಂಚಾಯತ್‌ನಲ್ಲಿ ನಮ್ಮ ಕಾಲೇಜಿನ ನೇತೃತ್ವದಲ್ಲಿ ಉಚಿತ ಕಣ್ಣಿನ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಲಿದ್ದಾರೆ. ಕಾಲೇಜಿನ ಎನ್.ಎಸ್.ಎಸ್ ಘಟಕವು ವಾರ್ಷಿಕ ವಿಶೇಷ ಶಿಬಿರಗಳಲ್ಲಿ ಹಾಗೂ ಜಾಗೃತಿ ಕಾರ್ಯಕ್ರಮಗಳಲ್ಲಿ ಆರೋಗ್ಯದ ಕುರಿತು ಸಾರ್ವಜನಿಕರಿಗೆ ಜಾಗೃತಿಯನ್ನು ಮೂಡಿಸುವ ಪ್ರಯತ್ನವನ್ನು ಮಾಡುತ್ತಿದೆ. ಅದರಲ್ಲಿಯೂ ಘಟಕವು ಗ್ರಾಮಮಟ್ಟದಲ್ಲಿ ಹತ್ತು ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರುತ್ತಿದ್ದು ಸಮಾಜ ಕೇಂದ್ರಿತ ಕಾರ್ಯಕ್ರಮಗಳಾಗಿವೆ ಎಂದು ಹೇಳಿದರು. ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್ ಅಧಿಕಾರಿ ಬಿ.ಎನ್. ಶಾಂತಿಭೂಷಣ್ ರವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭ ಬೇಟೋಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಿ. ಮಣಿ, ಸದಸ್ಯರಾದ ಅಮ್ಮಣಕುಟ್ಟಂಡ ವಸಂತ ಕಟ್ಟಿ, ರಜಾಕ್, ಸೆಂಟ್ ಆನ್ಸ್ ಪದವಿ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ ಬಿ. ಡಿ, ಉಪನ್ಯಾಸಕರು, ಎನ್.ಎಸ್.ಎಸ್ ವಿದ್ಯಾರ್ಥಿಗಳು, ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವೀರಾಜಪೇಟೆಯ ಡಾ. ಅಗರ್‌ವಾಲ್ಸ್ ಕ್ಲಿನಿಕ್ ವತಿಯಿಂದ ಕಣ್ಣಿನ ತಪಾಸಣೆ ಹಾಗೂ ಅಪೋಲೋ ಫಾರ್ಮಸಿಯ ವತಿಯಿಂದ ಆರೋಗ್ಯ ತಪಾಸಣೆ ನಡೆಯಿತು.

ಬೆಳಿಗ್ಗೆಯಿಂದ ಸಂಜೆಯ ತನಕವೂ ಜರುಗಿದ ಈ ಶಿಬಿರದಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕ್ಲಿನಿಕ್‌ನ ಸಿಬ್ಬಂದಿಗಳು ಆರೋಗ್ಯ ಹಾಗೂ ಕಣ್ಣನ್ನು ತಪಾಸಣೆ ಮಾಡುವ ಮೂಲಕ ಸಾರ್ವಜನಿಕರಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭ ಡಾ. ಅಗರ್‌ವಾಲ್ಸ್ ಕ್ಲಿನಿಕ್‌ನ ನಿರ್ವಹಣೆಗಾರರಾದ ಅರ್ಜುನ್ ದೇವಯ್ಯ, ಆಪ್ಟೋಮೆಟ್ರಿಸ್ಟ್ಗಳು, ಅಪೋಲೋ ಫಾರ್ಮಸಿಯ ಸಿಬ್ಬಂದಿಗಳು, ಬೇಟೋಳಿ ಭಾಗದ ಗ್ರಾಮ ಸುಶ್ರೂಷಕಿ ಉಪಸ್ಥಿತರಿದ್ದರು.