ಮಡಿಕೇರಿ, ನ. ೩೦: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಜಿಲ್ಲಾ ಜಾನಪದ ಪರಿಷತ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ನಗರಸಭೆ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಜಿಲ್ಲಾ ಲಯನ್ಸ್ ಟ್ರಸ್ಟ್, ಜಿಲ್ಲಾ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಇಲಾಖೆ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದೊಂದಿಗೆ ಹಾಡಿರೆ ರಾಗಗಳ ತೂಗಿರೆ ದೀಪಗಳ ಕಾರ್ಯಕ್ರಮವು ಡಿಸೆಂಬರ್ ೩ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.