ಶನಿವಾರಸಂತೆ, ನ. ೩೦: ಪಟ್ಟಣದ ಸನ್ನಿಧಿ ವಿಶೇಷ ಚೇತನ ಮಕ್ಕಳ ವಸತಿ ಶಾಲೆಯಲ್ಲಿ ಸೋಮವಾರಪೇಟೆ ತಾಲೂಕು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹಟ್ಟುಹಬ್ಬದ ಪ್ರಯುಕ್ತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ನ ತಾಲೂಕು ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ ಮಾತನಾಡಿ, ವಿಶೇಷಚೇತನ ಮಕ್ಕಳ ಶಾಲೆ ನಡೆಸುತ್ತಿರುವುದು ಧರ್ಮಾಧಿಕಾರಿ ಹೆಗ್ಗಡೆಯವರಿಗೆ ನೀಡುವ ಗೌರವವಾಗಿದೆ. ಹೆಗ್ಗಡೆಯವರ ಸಮಾಜಮುಖಿ ಕಾರ್ಯಗಳಲ್ಲಿ ಇದೂ ಒಂದಾಗಿದೆ ಎಂದು ಹೇಳಿ ಶುಭ ಹಾರೈಸಿದರು. ಒಕ್ಕೂಟದ ಅಧ್ಯಕ್ಷೆ ಭಾಗ್ಯಾ ಪದ್ಮನಾಭ, ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯೆ ಪೂರ್ಣಿಮಾ ಕಿರಣ್, ಗ್ರಾಮ ಪಂಚಾಯಿತಿ ಸದಸ್ಯ ಸಿ.ಜೆ. ಗಿರೀಶ್, ವಿಘ್ನೇಶ್ವರ ಪ್ರೌಢಶಾಲೆ ಶಿಕ್ಷಕ ಕೆ.ಪಿ. ಜಯಕುಮಾರ್, ಉದ್ಯಮಿ ದಿವಾಕರ್ ಮಾತನಾಡಿ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಹರೀಶ್ ಮಾತನಾಡಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಸಮಾಜಸೇವೆಯನ್ನು ಸ್ಮರಿಸಿದರು. ತಾಲೂಕು ಕೃಷಿ ಮೇಲ್ವಿಚಾರಕ ಹರೀಶ್, ಶನಿವಾರಸಂತೆ ವಲಯ ಮೇಲ್ವಿಚಾರಕಿ ಜಯಶ್ರೀ, ಒಕ್ಕೂಟದ ಅಧ್ಯಕ್ಷರಾದ ಶಾಹಿನ್ ತಾಜ್, ಸರೋಜಾ ಶೇಖರ್, ಸನ್ನಿಧಿ ವಿಶೇಷಚೇತನ ವಸತಿ ಶಾಲೆಯ ಮುಖ್ಯಶಿಕ್ಷಕಿ ಸುಷ್ಮಾ ನಿರಂಜನ್, ಒಕ್ಕೂಟದ ಪದಾಧಿಕಾರಿಗಳು, ಗ್ರಂಥಾಲಯ ಮೇಲ್ವಿಚಾರಕಿ ಎಸ್.ಪಿ. ದಿವ್ಯಾ, ಸೇವಾ ಪ್ರತಿನಿಧಿಗಳು, ಗ್ರಾಮ ಪ್ರಮುಖರು ಹಾಜರಿದ್ದರು.
ಕೃಷಿ ಅಧಿಕಾರಿ ಹರೀಶ್ ಸ್ವಾಗತಿಸಿ, ಮೇಲ್ವಿಚಾರಕಿ ಜಯಶ್ರೀ ನಿರೂಪಿಸಿದರು. ವಿಶೇಷ ಚೇತನ ಮಕ್ಕಳಿಗೆ ಸಿಹಿತಿಂಡಿ-ಭೋಜನ ವ್ಯವಸ್ಥೆ ಮಾಡಲಾಗಿತ್ತು.