ಹೆಬ್ಬಾಲೆ ಡಿ. ೧ : ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ೨೦೨೫-೨೬ ನೇ ಸಾಲಿನ ರಾಷ್ಟ್ರೀಯ ಆವಿಷ್ಕಾರ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ತೊರೆನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿಜ್ಞಾನ ಶಿಕ್ಷಕಿ ಬಿ.ಪಿ.ಸವಿತ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ವಿಜ್ಞಾನ ವಿಷಯಕ್ಕೆ ಸಂಬAದಿಸಿದAತೆ ನಾನಾ ರೀತಿಯ ವಿಜ್ಞಾನ ಮಾದರಿಗಳು, ಪ್ರಯೋಗಗಳನ್ನು ಪ್ರದರ್ಶಿಸುವ ಮೂಲಕ ಎಲ್ಲರ ಗಮನ ಸೆಳೆದರು.

ವಸ್ತು ಪ್ರದರ್ಶನದಲ್ಲಿ ವಿಜ್ಞಾನಕ್ಕೆ ಸಂಬAಧಿಸಿದ ಪರಮಾಣುಗಳ ರಚನೆ, ವಿದ್ಯುತ್ಕಾಂತೀಯ ಕ್ರೇನ್, ಪರಿಸರ ಮಾಲಿನ್ಯ ನಿಯಂತ್ರಣ, ರಕ್ತ ಶುದ್ಧೀಕರಣ, ಸ್ವಯಂ ಚಾಲಿತ ಗಡಿ ಕಾಯುವ ಯಂತ್ರ, ಸೌರಶಕ್ತಿ ಬಳಕೆ, ಜಲಶಕ್ತಿ, ಬಾಹ್ಯಾಕಾಶ ಕ್ಷೇತ್ರ, ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣ, ಸ್ವಯಂ ಚಾಲಿತ ಹನಿ ನೀರಾವರಿ ಪದ್ಧತಿ, ಜೀವಶಾಸ್ತç ಸೇರಿದಂತೆ ನಾನಾ ಬಗೆಯ ವಿಜ್ಞಾನ ಮಾದರಿ ಪ್ರದರ್ಶನ ಆಕರ್ಷಕವಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಮಾತನಾಡಿ, ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಸ್ಥಳೀಯ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಕಂಡುಕೊಳ್ಳುವ ಮೂಲಕ ವಿಜ್ಞಾನ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್ ಮಾತನಾಡಿ, ಇಂತಹ ವಿಜ್ಞಾನ ವಸ್ತು ಪ್ರದರ್ಶನವು ವಿದ್ಯಾರ್ಥಿಗಳಲ್ಲಿ ಗಣಿತ, ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯಗಳ ಕುತೂಹಲವನ್ನು ಹೆಚ್ಚಿಸಿ ಅವರನ್ನು ಸಂಶೋಧನಾತ್ಮಕ ಪ್ರಯೋಗಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ ಎಂದು ಹೇಳಿದರು.

ಶಾಲಾ ಮುಖ್ಯ ಶಿಕ್ಷಕ ಬಿ.ಆರ್.ಸತ್ಯನಾರಾಯಣ ಮಾತನಾಡಿ, ಈ ವಸ್ತು ಪ್ರದರ್ಶನವು ಮಕ್ಕಳ ಪ್ರತಿಭೆ ಅನಾವರಣಕ್ಕೊಂದು ಉತ್ತಮ ವೇದಿಕೆಯಾಗಿದೆ ಎಂದರು.

ವಿಜ್ಞಾನ ಶಿಕ್ಷಕಿ ಬಿ.ಪಿ.ಸವಿತ, ಈ ವಸ್ತು ಪ್ರದರ್ಶನವು ಮಕ್ಕಳಲ್ಲಿ ವಿಜ್ಞಾನ ಕಲಿಕೆಗೆ ಸಹಕಾರಿಯಾಗಿದೆ ಎಂದರು. ಎಸ್.ಡಿ.ಎಂ.ಸಿ.ಅಧ್ಯಕ್ಷ ಟಿ.ಎಚ್.ಗಣೇಶ್ ಅಧ್ಯಕ್ಷತೆ ವಹಿಸಿದ್ದರು.ಎಸ್.ಡಿ.ಎಂ.ಸಿ. ಮಾಜಿ ಅಧ್ಯಕ್ಷ ಅಣ್ಣಯ್ಯ, ಉಪಾಧ್ಯಕ್ಷೆ ಸುಷ್ಮಾ, ಸದಸ್ಯರಾದ ರವಿಚಂದ್ರ, ದಿನೇಶ್, ತೊರೆನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಭಾಗ್ಯಲಕ್ಷ್ಮಿ, ಶಿರಂಗಾಲ ಸರ್ಕಾರಿ ಪ್ರೌಢಶಾಲೆಯ ಹಿರಿಯ ಶಿಕ್ಷಕಿ ಶೈಲಜಾ ಸಂಪನ್ಮೂಲ ಶಿಕ್ಷಕಿಯರಾದ ಹೆಬ್ಬಾಲೆ ಶಾಲೆಯ ಶಿಕ್ಷಕಿ ರಮ್ಯ, ಚಿಕ್ಕ ಅಳುವಾರ ಶಾಲೆಯ ಶಿಕ್ಷಕಿ ರೇಖಾ, ಶಿಕ್ಷಕರು ಪಾಲ್ಗೊಂಡಿದ್ದರು. ಶಿಕ್ಷಕ ಜಿ. ಶ್ರೀಹರ್ಷ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕ ಟಿ.ಬಿ. ಮಂಜುನಾಥ್ ವಂದಿಸಿದರು.