ನಾಪೋಕ್ಲು ಡಿ. ೧ : ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ದೈಹಿಕ ಸಾಮರ್ಥ್ಯವನ್ನು ಒರೆಗೆ ಹಚ್ಚಲು ಕ್ರೀಡೆ ಸಹಕಾರಿಯಾಗಿದೆ ಎಂದು ಅಂತರರಾಷ್ಟಿçÃಯ ಬಾಸ್ಕೆಟ್ ಬಾಲ್ ಕ್ರೀಡಾಪಟು, ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ .ಪುಷ್ಪ ಕುಟ್ಟಣ್ಣ ಹೇಳಿದರು. ಇಲ್ಲಿನ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಶನಿವಾರ ಸ್ಥಳೀಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಕ್ರೀಡಾ ಜ್ಯೋತಿ ಬೆಳಗಿಸಿದ ಬಳಿಕ ಪಥ ಸಂಚಲನ ಗೌರವ ರಕ್ಷೆ ಸ್ವೀಕರಿಸಿ ಮಾತನಾಡಿದರು.

ಕ್ರೀಡೆ ಮಾನಸಿಕ ಹಾಗೂ ದೈಹಿಕ ಸಾಮರ್ಥ್ಯ ವೃದ್ಧಿಸಲು ಸಹಕಾರಿ. ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳು ಉತ್ತಮ ಬದುಕನ್ನು ಕಟ್ಟಿಕೊಳ್ಳಬಹುದಾಗಿದೆ. ಆದರೆ ಬಹುತೇಕ ಪೋಷಕರಲ್ಲಿ ಕ್ರೀಡೆಯ ಬಗ್ಗೆ ನಿರ್ಲಕ್ಷ್ಯ ಭಾವನೆ ಇದ್ದು ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆಗೆ ಅವಕಾಶ ಕಲ್ಪಿಸಿ ಕೊಡದೆ ಇರುವುದು ಬೇಸರದ ವಿಷಯ. ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಉತ್ತಮ ಬೆಳವಣಿಗೆ ಸಾಧ್ಯ.ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ನಿರರ್ಥಕ ಎಂಬ ಮನೋಭಾವನೆಯನ್ನು ಬದಿಗೊತ್ತಿ ಪೋಷಕರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಬೇಕು ಎಂದರು.

ವಿದ್ಯಾ ಸಂಸ್ಥೆಯ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಉಪಾಧ್ಯಕ್ಷ ನೆರವಂಡ ಸುನಿಲ್ ದೇವಯ್ಯ, ಕಾರ್ಯದರ್ಶಿ ನಾಯಕಂಡ ದೀಪಕ್ ಚಂಗಪ್ಪ, ನಿರ್ದೇಶಕರಾದ ನಿವೃತ ಡಿ ವೈ ಎಸ್ ಪಿ ಬಿದ್ದಾಟಂಡ ಮುತ್ತಣ್ಣ, ಅಪ್ಪಚೆಟ್ಟೋಳಂಡ ನವೀನ್ ಅಪ್ಪಯ್ಯ, ಕಲಿಯಂಡ ಕೌಶಿಕ್ ಕುಶಾಲಪ್ಪ, ಬಟ್ಟಿರ ಸುಬ್ಬಯ್ಯ, ಪ್ರಾಂಶುಪಾಲರಾದ ಕಲ್ಯಾಟಂಡ ಶಾರದಾ ಹಾಗೂ ಹಿರಿಯರಾದ ಮಂದಪAಡ ಕುಟ್ಟಣ್ಣ ಮತ್ತು ಶಿಕ್ಷಕ ವರ್ಗ ಸಿಬ್ಬಂದಿ, ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕ್ರೀಡೋತ್ಸವದಲ್ಲಿ ವಿದ್ಯಾರ್ಥಿಗಳಿಂದ ಅಂಗ ಸಾಧನೆ, ಲೇಜಿಮ್, ಪಥಸಂಚಲನ ಸೇರಿದಂತೆ ವಿವಿಧ ಮನನ ಮನರಂಜನ ಕಾರ್ಯಕ್ರಮ ಜರುಗಿದವು. ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ, ಆಡಳಿತ ಮಂಡಳಿ ಪದಾಧಿಕಾರಿ ಸದಸ್ಯರಿಗೆ, ಶಿಕ್ಷಕರಿಗೆ, ಸಿಬ್ಬಂದಿಗಳಿಗೆ, ಪೋಷಕರಿಗೆ ಪ್ರತ್ಯೇಕವಾಗಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು, ವಿಜೇತರಾದವರಿಗೆ ಗಣ್ಯರು ಬಹುಮಾನಗಳನ್ನು ವಿತರಿಸಿದರು.

ವಿದ್ಯಾರ್ಥಿ ಪರಿಧಿ ಪೂವಮ್ಮ ಪ್ರಾರ್ಥಿಸಿ, ಶಾಲಾ ಪ್ರಾಂಶುಪಾಲರಾದ ಕಲ್ಯಾಟಂಡ ಶಾರದಾ ಅವರು ಸ್ವಾಗತಿಸಿ ಪ್ರಾಸ್ತಾವಿಕ ನುಡಿಯಾಡಿದರು, ಅತಿಥಿಗಳ ಪರಿಚಯವನ್ನು ಶಿಕ್ಷಕಿ ಉದಿಯಂಡ ಲೀಲಾವತಿ ಮಾಡಿ ದೈಹಿಕ ಶಿಕ್ಷಣ ಶಿಕ್ಷಕಿ ಕನ್ನಡ ಸರಿತಾ ಕ್ರೀಡಾ ವರದಿ ವಾಚಿಸಿದರು, ಶಿಕ್ಷಕರಾದ ಮೂಡೇರ ಕಾಳಯ್ಯ ಹಾಗೂ ಶಿಕ್ಷಕಿ ಕಂಗAಡ ಶ್ವೇತ ಕಾರ್ಯಕ್ರಮವನ್ನು ನಿರೂಪಿಸಿ ಅನಿತಾ ವಂದಿಸಿದರು.