ಮಡಿಕೇರಿ, ಡಿ. ೧ : ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ ೧೬ ರಿಂದ ೨೪ ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳು ಶಿಷ್ಯ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
೨೦೨೫-೨೬ನೇ ಸಾಲಿನ ಶಿಷ್ಯವೇತನಕ್ಕೆ ಆಯ್ಕೆ ಪ್ರಕ್ರಿಯೆಯನ್ನು ಮೊಬೈಲ್/ ವಿಡಿಯೋ ಚಿತ್ರೀಕರಣದ ಮೂಲಕ ಈ ಕೆಳಕಂಡAತೆ ಆಯ್ಕೆ ಮಾಡಲು ಅಕಾಡೆಮಿ ತೀರ್ಮಾನಿಸಿದೆ. ಶಿಷ್ಯವೇತನ ಅರ್ಜಿಗಳ ಬಗ್ಗೆ ಮಾಹಿತಿಯನ್ನು ಅಕಾಡೆಮಿ ಪೇಸ್ ಬುಕ್ (ಜಿಚಿಛಿe booಞ: ಛಿom/ ಞಚಿಡಿಟಿಚಿಣಚಿಞಚಿsಚಿಟಿgeeಣಚಿಟಿಡಿuಣಥಿಚಿಚಿಛಿಜemಥಿ) ಮೂಲಕ ಪಡೆದು ವೆಬ್‌ಸೈಟ್ (sಚಿಟಿgeeಣಚಿಟಿಡಿiಣಥಿಚಿ ಚಿಛಿಚಿಜemಥಿ. ಞಚಿಡಿಟಿಚಿಣಚಿಞಚಿ.gov.iಟಿ) ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಅರ್ಜಿಯನ್ನು ಆಯಾಯ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕರ ಕಚೇರಿಯಲ್ಲಿ ಪಡೆಯಬಹುದಾಗಿದೆ. ಸಂದರ್ಶನದ ಬದಲಿಗೆ ಅಭ್ಯರ್ಥಿಗಳು ಇನ್ನು ಮುಂದೆ ಅರ್ಜಿಯಲ್ಲಿ ನೀಡಿರುವ ಪಠ್ಯಕ್ರಮವನ್ನು ಮೊಬೈಲ್-ವೀಡಿಯೋ ಚಿತ್ರೀಕರಿಸಿ, ಪೆನ್‌ಡ್ರೆöÊವ್‌ನಲ್ಲಿ ಅಳವಡಿಸಿ, ಪೆನ್‌ಡ್ರೆöÊವ್‌ನೊಂದಿಗೆ ಅರ್ಜಿಯನ್ನು ರಿಜಿಸ್ಟಾçರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, ೨ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-೫೬೦೦೦೨ ಕಾರ್ಯಾಲಯಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ತಲುಪಿಸಬಹುದು. ಈ ರೀತಿಯಾಗಿ ಬಂದ ಅರ್ಜಿಗಳನ್ನು ಆಯಾಯ ಕಲಾ ಪ್ರಕಾರಕ್ಕೆ ಅನುಗುಣವಾಗಿ ತೀರ್ಪುಗಾರರು ಅಭ್ಯರ್ಥಿಗಳು ಚಿತ್ರೀಕರಿಸಿ, ಕಳುಹಿಸಿಕೊಟ್ಟಿರುವ ಪೆನ್‌ಡ್ರೆöÊವ್ ಅನ್ನು ಪರಿಶೀಲಿಸಿ, ಶಿಷ್ಯವೇತನಕ್ಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಪಠ್ಯಕ್ರಮ ಚಿತ್ರೀಕರಿಸಿದ ಪೆನ್‌ಡ್ರೆöÊವ್‌ನೊಂದಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ ೨೦ ಕೊನೆಯ ದಿನವಾಗಿದೆ. ತೀರ್ಪುಗಾರರ ತೀರ್ಮಾನವೇ ಅಂತಿಮ. ಆಸಕ್ತ ಅರ್ಹ ಕಲಾವಿದರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಹಾಗೂ ಸಿಬ್ಬಂದಿಗಳನ್ನು ಕಚೇರಿ ವೇಳೆಯಲ್ಲಿ ಭೇಟಿ ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಕೋರಿದ್ದಾರೆ.