ಸಿದ್ದಾಪುರ, ಡಿ. ೧: ಸಿದ್ದಾಪುರದ ಸಂಜೀವಿನಿ ಒಕ್ಕೂಟದ ವತಿಯಿಂದ ಸಿದ್ದಾಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ ಸಂತೆ ಮೇಳ ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮವನ್ನು ಸಿದ್ದಾಪುರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪಳನಿ ಸ್ವಾಮಿ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಂಜೀವಿನಿ ಒಕ್ಕೂಟದ ಪ್ರಮುಖರಾದ ಎಂ.ಎ. ಯಮುನ ಮಹಿಳೆಯರು ತಾವು ಮನೆಯಲ್ಲಿ ತಯಾರಿಸಿದ ತಿಂಡಿ ತಿನಿಸುಗಳು ಹಾಗೂ ಇನ್ನಿತರ ಪದಾರ್ಥಗಳನ್ನು ಮಾರಾಟ ಮಾಡಲು ಸಂತೆ ಮೇಳವನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು. ಮಹಿಳೆಯರು ಆರ್ಥಿಕವಾಗಿ ಮುಂದೆ ಬರುವ ನಿಟ್ಟಿನಲ್ಲಿ ಸಂಜೀವಿನಿ ಒಕ್ಕೂಟದ ವತಿಯಿಂದ ಸಂತೆ ಮೇಳವನ್ನು ಆಯೋಜಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಸದಸ್ಯರು ಹಾಜರಿದ್ದರು.