ಮಡಿಕೇರಿ, ಡಿ. ೨: ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ, ಮಡಿಕೇರಿ ನೇತೃತ್ವದಲ್ಲಿ ಕುಶಾಲನಗರ, ಸೋಮವಾರಪೇಟೆ, ಪೊನ್ನಂಪೇಟೆ ಹಾಗೂ ವೀರಾಜಪೇಟೆ ತಾಲೂಕುಗಳ ಬ್ರಾಹ್ಮಣ ಸಮಾಜಗಳ ಸಂಯುಕ್ತಾಶ್ರಯದಲ್ಲಿ ೪ನೇ ವರ್ಷದ ವಿಪ್ರ ಕ್ರೀಡೋತ್ಸವ ತಾ. ೭ ಹಾಗೂ ೧೪ ರಂದು ನಡೆಯಲಿದೆ ಎಂದು ಸಂಘಟನೆ ಪ್ರಮುಖರು ಮಾಹಿತಿ ನೀಡಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಕ್ರೀಡಾ ಸಂಚಾಲಕ ಹಾಗೂ ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಜಗದೀಶ್, ತಾ. ೭ ರಂದು ಮಡಿಕೇರಿಯ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಶಟಲ್ ಹಾಗೂ ಟೇಬಲ್ ಟೆನ್ನಿಸ್ ಪಂದ್ಯಾವಳಿಯನ್ನು ಆಯೋಜಿಸ ಲಾಗಿದೆ. ಪುರುಷರ ಹಾಗೂ ಮಹಿಳೆಯರು, ೫೦ ವರ್ಷ ಮೇಲ್ಪಟ್ಟವರ ವಿಭಾಗ ಹಾಗೂ ಬಾಲಕ, ಬಾಲಕಿಯರಿಗಾಗಿ ಸಿಂಗಲ್ಸ್ ಹಾಗೂ ಡಬಲ್ಸ್ ವಿಭಾಗದಲ್ಲಿ ಪಂದ್ಯಾವಳಿ ನಡೆಯಲಿದೆ. ಅಂದು ಬೆಳಿಗ್ಗೆ ೯ ಗಂಟೆಯೊಳಗಾಗಿ ಹೆಸರು ೪ನಾಲ್ಕನೇ ಪುಟಕ್ಕೆ (ಮೊದಲ ಪುಟದಿಂದ)

ನೋAದಾಯಿಸಿಕೊಳ್ಳುವAತೆ ಮನವಿ ಮಾಡಿದರು. ತಾ. ೧೪ ರಂದು ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ವೀರಾಜಪೇಟೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ. ಈಗಾಗಲೇ ೯ ತಂಡಗಳು ನೋಂದಾಯಿಸಿಕೊAಡಿದ್ದು, ಆಸಕ್ತರು ತಾ. ೫ ರೊಳಗಾಗಿ ತಂಡವನ್ನು ನೋಂದಾಯಿಸಿಕೊಳ್ಳಬೇಕು. ಅದೇ ದಿನ ಸಂಜೆ ಹಗ್ಗಜಗ್ಗಾಟ ಸ್ಪರ್ಧೆ ನಡೆಯಲಿದೆ ಎಂದರು.

ತಾಲೂಕು ಮಟ್ಟದಲ್ಲಿ ಚೆಸ್, ಕೇರಂ ಪಂದ್ಯ ಆಯೋಜನೆ ಮಾಡಲಾಗಿದ್ದು, ಈ ಪಂದ್ಯದಲ್ಲಿ ಗೆಲುವು ಸಾಧಿಸುವವರು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಅರ್ಹತೆ ಪಡೆಯಲಿದ್ದಾರೆ. ಜನವರಿ ತಿಂಗಳಿನಲ್ಲಿ ಮಡಿಕೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಪ್ರದಾನದೊಂದಿಗೆ ಕ್ರೀಡಾ ವಿಜೇತರಿಗೆ ಬಹುಮಾನ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ತಂಡಗಳ ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗೆ ೯೪೮೩೩೩೩೦೦೭, ೯೪೪೮೨೦೬೬೮೮ ಸಂಖ್ಯೆಯನ್ನು ಸಂಪರ್ಕಿಸುವAತೆ ಮನವಿ ಮಾಡಿದರು.

ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಅಧ್ಯಕ್ಷ ರಾಮಚಂದ್ರ ಮೂಗುರು ಮಾತನಾಡಿ, ಕ್ರೀಡೆಯಿಂದ ಸಮುದಾಯ ಸಂಘಟಿತಗೊಳ್ಳುತ್ತದೆ. ಈ ಬಾರಿಯೂ ವ್ಯವಸ್ಥಿತವಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಭರತೇಶ್ ಕಂಡಿಗೆ, ನಿರ್ದೇಶಕರುಗಳಾದ ಬಿ.ಕೆ. ಅರುಣ್ ಕುಮಾರ್, ಎಂ.ಎA. ಶ್ಯಾಮಲ ಹಾಜರಿದ್ದರು.