ಸಿದ್ದಾಪುರ, ಡಿ. ೨ : ಕರಡಿಗೋಡು ಗ್ರಾಮದಲ್ಲಿ ಕಾಡಾನೆಗಳ ಹಾವಳಿಯಿಂದಾಗಿ ಕೃಷಿ ಫಸಲುಗಳಿಗೆ ಹಾನಿಯಾಗಿವೆ. ಕರಡಿಗೋಡು ಗ್ರಾಮದ ಕಂಬಿರAಡ ನಂದ ಗಣಪತಿ ಎಂಬವರ ಕಾಫಿ ತೋಟಗಳಿಗೆ ರಾತ್ರಿ ಸಮಯದಲ್ಲಿ ಕಾಡಾನೆಗಳ ಹಿಂಡು ಬೀಡು ಬಿಟ್ಟು ದಾಂಧಲೆ ನಡೆಸಿ ಫಸಲಿರುವ ಕಾಫಿ ಗಿಡಗಳನ್ನು ಹಾಗೂ ಅಡಿಕೆ ಮರಗಳನ್ನು ಧ್ವಂಸಗೊಳಿಸಿವೆ.

ಇದರಿAದಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ನಂದ ಗಣಪತಿ ವೀರಾಜಪೇಟೆ ವಲಯ ಅರಣ್ಯ ಅಧಿಕಾರಿಗೆ ದೂರು ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಕಾಡಾನೆಗಳು ರಾತ್ರಿ ಸಮಯದಲ್ಲಿ ಕಾಫಿ ತೋಟದೊಳಕ್ಕೆ ನುಗ್ಗಿ ದಾಂಧಲೆ ನಡೆಸಿ ಕೃಷಿ ಫಸಲುಗಳನ್ನು ನಾಶಗೊಳಿಸಿವೆ ಎಂದು ಅವರು ತಿಳಿಸಿದ್ದಾರೆ.

ಮನೆಯ ಸಮೀಪಕ್ಕೆ ಬಂದು ಘೀಳಿಡುತ್ತಾ ಹಣ್ಣು ಹಂಪಲುಗಳ ಗಿಡಗಳನ್ನು ಕೂಡ ನಾಶಮಾಡಿವೆ. ಮಿತಿಮೀರಿದ ಕಾಡಾನೆಗಳ ಹಾವಳಿಯಿಂದಾಗಿ ಸಂಜೆ ಮನೆಯಿಂದ ಹೊರಬಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಾರ್ಮಿಕರು ಕಾಫಿ ತೋಟದೊಳಗೆ ಕೆಲಸಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಕೂಡಲೇ ಸರಕಾರವು ಶಾಶ್ವತ ಯೋಜನೆಯನ್ನು ರೂಪಿಸಿ ಕಾಡಾನೆಗಳ ಹಾವಳಿಯನ್ನು ತಡೆಗಟ್ಟಬೇಕೆಂದು ನಂದ ಗಣಪತಿ ಒತ್ತಾಯಿಸಿದ್ದಾರೆ.