ಮಡಿಕೇರಿ, ಡಿ. ೨: ಕೊಡಗು ಜಿಲ್ಲೆಯ ಮಕ್ಕಳು ಉದ್ಯೋಗಕ್ಕಾಗಿ ಜಿಲ್ಲೆಯನ್ನು ಬಿಟ್ಟು ಹೋಗುವ ಅವಶ್ಯಕತೆ ಇಲ್ಲ; ಕೃಷಿ, ಪ್ರವಾಸೋದ್ಯಮದಲ್ಲಿ ಇಂದು ವಿಪುಲ ಅವಕಾಶಗಳಿವೆ ಎಂದು ಪೊನ್ನಂಪೇಟೆ ಅರಣ್ಯ ವಿದ್ಯಾಲಯದ ನಿವೃತ್ತ ಡೀನ್ ಚೆಪ್ಪುಡಿರ ಜಿ. ಕುಶಾಲಪ್ಪ ಹೇಳಿದರು.

ಮೂರ್ನಾಡಿನ ಮಾರುತಿ ವಿದ್ಯಾ ಸಂಸ್ಥೆಯ ೪೨ನೇ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ತಂದೆಯ ಪಾತ್ರ ಮಹತ್ವದ್ದಾಗಿದೆ. ಮಕ್ಕಳು ತಾಯಿಯ ತ್ಯಾಗವನ್ನು ಅರಿತು ಮುನ್ನಡೆಯಬೇಕು. ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಅದನ್ನು ಈಡೇರಿಸುವ ದಿಸೆಯಲ್ಲಿ ನಿರಂತರ ಕನಸು ಕಾಣುವಂತಾಗಬೇಕೆAದು ಹೇಳಿದರು.

ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಮುಂಡAಡ ಕೆ. ಅಪ್ಪಚ್ಚು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ಪ್ರಾಮಾಣಿಕತೆ, ಶ್ರದ್ಧೆ ಮತ್ತು ಮಾನವೀಯ ಮೌಲ್ಯಗಳನ್ನು ತಮ್ಮ ಬದುಕಿನುದ್ದಕ್ಕೂ ಅಳವಡಿಸಿಕೊಂಡು ದೇಶದ ಸತ್ಪ್ರಜೆಗಳಾಗುವಂತೆ ಕರೆ ನೀಡಿದರು. ಪ್ರಾಂಶುಪಾಲೆ ಸುಮಿತ ವಾರ್ಷಿಕ ವರದಿಯನ್ನು ಮಂಡಿಸಿದರು. ಆಡಳಿತ ಮಂಡಳಿಯ ಉಪಾಧ್ಯಕ್ಷ ಚೇಂದ್ರಿಮಡ ಗಿಲ್ ಸೋಮಯ್ಯ, ಗೌರವ ಕಾರ್ಯದರ್ಶಿ ಬಡುವಂಡ ಅರುಣ್ ಅಪ್ಪಚ್ಚು, ನಿರ್ದೇಶಕರಾದ ಮುಂಡAಡ ನೀಲವ್ವ ಮುತ್ತಣ್ಣ, ಬಡುವಂಡ ನೀಲಮ್ಮ ಮುತ್ತಪ್ಪ, ಚೇಂದ್ರಿಮಡ ರೂಪ ಸೋಮಯ್ಯ, ಉಪ ಪ್ರಾಂಶುಪಾಲೆ ಹೇಮಾವತಿ, ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಲಿಂಚನ ತಂಡದವರು ಪ್ರಾರ್ಥಿಸಿ, ರಿತೇಶ್ ಸ್ವಾಗತಿಸಿದರು. ವಾರ್ಷಿಕೋತ್ಸವದ ಪ್ರಯುಕ್ತ ನಡೆಸಲಾದ ಕ್ರೀಡಾಸ್ಪರ್ಧೆಗಳಲ್ಲಿ ಮತ್ತು ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.

ಪ್ರೀನರ್ಸರಿ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮ, ಒಂದನೇ ತರಗತಿಯಿಂದ ಪಿಯುಸಿಯವರೆಗಿನ ವಿದ್ಯಾರ್ಥಿ, ವಿದ್ಯಾರ್ಥಿ ನಿಯರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ರುದ್ರಾ ಕಿಶೋರ್ ಮತ್ತು ಹಬೀಬಾ ಸಾಂಸ್ಕೃತಿಕ ಕಾರ್ಯಕ್ರಮದ ನಿರೂಪಣೆ ಮಾಡಿದರು. ಲನ ಚೋಂದಮ್ಮ ವಂದಿಸಿದರು.