ಮಡಿಕೇರಿ, ಡಿ. ೩ : ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆಯ ೬ ಸಾವಿರ ರೂ.ಗಳೊಂದಿಗೆ ರಾಜ್ಯ ಬಿಜೆಪಿ ಸರ್ಕಾರ ಹೆಚ್ಚುವರಿಯಾಗಿ ನೀಡುತ್ತಿದ್ದ ರೂ. ೪ ಸಾವಿರ ರೂಪಾಯಿಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಕಡಿತಗೊಳಿಸಿದೆ. ಕೊಡಗಿನ ರೈತರು ವನ್ಯಪ್ರಾಣಿಗಳ ಹಾವಳಿಯಿಂದ ಬೆಳೆ ನಷ್ಟ ಅನುಭವಿಸುತ್ತಿದ್ದರೂ ಜೀವಹಾನಿಗಳು ನಡೆಯುತ್ತಿದ್ದರೂ ಸರ್ಕಾರ ಶಾಶ್ವತ ಪರಿಹಾರ ಕೈಗೊಳ್ಳುತ್ತಿಲ್ಲ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಜಾರಿಗೆ ತಂದಿದ್ದ ರೈತರ ಮಕ್ಕಳ ವಿದ್ಯಾನಿಧಿಯನ್ನು ಕೂಡ ಕಾಂಗ್ರೆಸ್ ಸರ್ಕಾರ ಕೈಬಿಟ್ಟಿದೆ. ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಕಾಫಿ, ಕರಿಮೆಣಸು, ಅಡಿಕೆ ಸೇರಿದಂತೆ ಇತರ ಬೆಳೆಗಳು ನಷ್ಟಕ್ಕೊಳಗಾಗಿದ್ದರೂ ಸರ್ಕಾರ ಸರ್ವೆ ನಡೆಸದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ನೂರಾರು ವರ್ಷಗಳಿಂದ ಜಿಲ್ಲೆಯಲ್ಲಿ ಸಿ ಆ್ಯಂಡ್ ಡಿ. ಜಾಗದಲ್ಲಿ ಮನೆಕಟ್ಟಿಕೊಂಡು, ಕೃಷಿ ಮಾಡಿಕೊಂಡು ಬಂದಿರುವ ರೈತರನ್ನು ಅಲ್ಲಿಂದÀ ತೆರವು ಮಾಡಿಸುವ ಪ್ರಯತ್ನ ರಾಜ್ಯ ಸರ್ಕಾರದಿಂದ ನಡೆಯುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಹಾಗೂ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಂಬAಧಿಸಿದ ಸಚಿವರುಗಳ ವಿರುದ್ಧ ಧಿಕ್ಕಾರ ಘೋಷಣೆ ಗಳನ್ನು ಕೂಗಿದರು.

ಜನರಿಗೆ ಸಂಕಷ್ಟ - ರಂಜನ್

ಪ್ರತಿಭಟನೆಯಲ್ಲಿ ಮಾತನಾ ಡಿದ ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್, ಮುಖ್ಯಮಂತ್ರಿ ಕುರ್ಚಿಗಾಗಿ ಸಿಎಂ ಹಾಗೂ ಡಿಸಿಎಂ ಕಿತ್ತಾಡುತ್ತಿದ್ದು, ಇವರಿಬ್ಬರ ಕಿತ್ತಾಟದಿಂದಾಗಿ ಆಡಳಿತ ಸಮರ್ಪ ಕವಾಗಿ ನಡೆಯದೆ ಜನತೆ ಸಂಕಷ್ಟ ಅನುಭವಿಸುವಂತಾಗಿದೆ ಎಂದರು. ಕೂಡಲೇ ಸಿಎಂ - ಡಿಸಿಎಂ ಬ್ರೇಕ್‌ಫಾಸ್ಟ್ ಸಭೆ ನಡೆಸುವುದನ್ನು ನಿಲ್ಲಿಸಲಿ ಎಂದು ನುಡಿದ ರಂಜನ್, ರಾಜ್ಯ ಅರಣ್ಯ ಇಲಾಖೆ ಸಚಿವರು ರೈತರಿಗೆ ತೊಂದರೆಯಾಗುವAತಹ ಸುತ್ತೋಲೆಗಳನ್ನು ಹೊರಡಿಸುತ್ತಿದ್ದು, ಇದನ್ನು ನಾವು ವಿರೋಧಿಸುತ್ತೇವೆ ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬೆಲೆ ಏರಿಕೆ ಹೆಚ್ಚಾಗಿದ್ದು, ಜನಸಾಮಾನ್ಯರಿಗೆ ತೊಂದರೆ ಆಗುತ್ತಿದೆ. ಕೂಡಲೇ ಸರ್ಕಾರ ಅಧಿಕಾರದಿಂದ ಕೆಳಗಿಳಿಯಲಿ ಎಂದು ಅಪ್ಪಚ್ಚು ರಂಜನ್ ಒತ್ತಾಯಿಸಿದರು.