ಮಡಿಕೇರಿ ಡಿ.೩ : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ೩೧ನೇ ವರ್ಷದ ಸಾರ್ವತ್ರಿಕ ‘ಪುತ್ತರಿ ನಮ್ಮೆ’ಯನ್ನು ಕೊಡವರ ಸಕಲ ಜನಪದ ಪರಂಪರೆಯAತೆ ರೋಹಿಣಿ ನಕ್ಷತ್ರದ ಆರಂಭದಲ್ಲಿ ಡಿ.೪ ರಂದು ಬೆಳಿಗ್ಗೆ ೧೦ ಗಂಟೆಗೆ ಬಾಳೆಲೆ ಹೋಬಳಿಯ “ಪತ್ತ್ ಕಟ್ಟ್” ನಾಡ್ ನ ಬಿಳೂರು ಗ್ರಾಮದಲ್ಲಿ ಆಚರಿಸಲಾಗುವುದು ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬಿಳೂರು ಗ್ರಾಮದ ಕಾಂಡೇರ ಸುರೇಶ್ ಅವರ ಭತ್ತದ ಗದ್ದೆಯಲ್ಲಿ ಗುರುವಾರ ಬೆಳಿಗ್ಗೆ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ನೇತೃತ್ವದಲ್ಲಿ ಕದಿರು ತೆಗೆಯುವ ಮೂಲಕ ‘ಪುತ್ತರಿ ನಮ್ಮೆ’ಯನ್ನು ಸಂಭ್ರಮದಿAದ ಆಚರಿಸಲಾಗುವುದು ಎಂದು ಹೇಳಿದ್ದಾರೆ.
ಕೊಡವರ ರಾಜ್ಯಾಂಗದತ್ತ ಹಕ್ಕುಗಳ ಮಂಡನೆಗೆ ಪೂರಕವಾಗಿ ಮತ್ತು ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಹಾಗೂ ಹಸ್ತಾಂತರಿಸುವ ಉದ್ದೇಶದಿಂದ ಕಳೆದ ಮೂರು ದಶಕಗಳಿಂದ ಕೊಡವರ ಎಲ್ಲಾ ಹಬ್ಬಗಳನ್ನು ಸಿಎನ್‌ಸಿ ಸಂಘಟನೆ ಸಾರ್ವತ್ರಿಕವಾಗಿ ಆಚರಿಸಿಕೊಂಡು ಬರುತ್ತಿದೆ.
ದುಡಿಕೊಟ್ಟ್ ಪಾಟ್ ಮೂಲಕ ಭತ್ತದ ಗದ್ದೆಗೆ ತೆರಳಿ ಕದಿರು ತೆಗೆದು ವಿವಿಧ ಕೊಡವ ಜನಪದ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಲಾಗುವುದು. ‘ಪುತ್ತರಿ ನಮ್ಮೆ’ಯ ಪ್ರಯುಕ್ತ ಸಾಂಪ್ರದಾಯಿಕ ಕೊಡವ ಭಕ್ಷö್ಯಗಳÀನ್ನು ಸ್ವೀಕರಿಸುವ ಮೂಲಕ ಕಾರ್ಯಕ್ರಮ ಸಮಾರೋಪಗೊಳ್ಳಲಿದೆ ಎಂದು ಎನ್.ಯು.ನಾಚಪ್ಪ ಮಾಹಿತಿ ನೀಡಿದ್ದಾರೆ.