ವೀರಾಜಪೇಟೆ, ಡಿ. ೫: ಆರೋಗ್ಯದ ಅಭ್ಯಾಸಗಳು ನಮ್ಮ ಬದುಕಿನ ಭಾಗವಾಗಬೇಕು ಎಂದು ಚನ್ನಪಟ್ಣಣದ ಚಾಮುಂಡೇಶ್ವರಿ ಮೆಡಿಕಲ್ ಕಾಲೇಜಿನ ಪ್ರೊಫೆಸರ್ ಹಾಗೂ ಮೂಳೆ ಚಿಕಿತ್ಸಾ ತಜ್ಞ ಡಾ. ಗೋಪಿನಾಥ್ ಹೇಳಿದರು.

ಲಯನ್ಸ್ ಕ್ಲಬ್ ವೀರಾಜಪೇಟೆ, ನಾರಾಯಣ ಆಸ್ಪತ್ರೆ ಮೈಸೂರು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕ್ರೆಡೋ-ನಾರಾಯಣ ಎಮರ್ಜೆನ್ಸಿ ಕೇರ್ ಸೆಂಟರ್ ಬಿಟ್ಟಂಗಾಲದಲ್ಲಿ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಜನರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ದೊರಕುವುದು ಅತಿ ಮುಖ್ಯವಾಗಿದೆ. ಅದಕ್ಕೂ ಮಿಗಿಲಾಗಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಪ್ರಮುಖವಾಗಿದೆ. ಕಾಯಿಲೆ ಬಂದ ನಂತರ ವೈದ್ಯರನ್ನು ಸಂಪರ್ಕಿಸುವುದಕ್ಕಿAತ, ಮುನ್ನೆಚ್ಚರಿಕೆ ಕ್ರಮ ವಹಿಸುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದರು.

ನಾರಾಯಣ ಆಸ್ಪತ್ರೆಯ ವೈದ್ಯ ಅಭಿಲಾಷ್ ಯಾದವ್ ಮಾತನಾಡಿ, ಎಲ್ಲರಿಗೂ ಆರೋಗ್ಯ ಸೇವೆಯನ್ನು ಸುಲಭವಾಗಿ ಲಭ್ಯವಾಗುವಂತೆ ಮಾಡುವುದು ನಮ್ಮ ಗುರಿ. ಬಡ ಹಾಗೂ ಮಧ್ಯಮ ವರ್ಗದ ಜನರ ಆರೋಗ್ಯ ಸುಧಾರಣೆಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗುತ್ತವೆ. ಪ್ರಸ್ತುತ ಪ್ರತಿಯೊಬ್ಬರು ಒಂದಿಲ್ಲೊAದು ಆರೋಗ್ಯ ಸಮಸ್ಯೆಗೆ ಒಳಗಾಗಿ ರುವುದನ್ನು ಕಾಣುತ್ತೇವೆ. ಒತ್ತಡ ಹಾಗೂ ಆಹಾರ ಕ್ರಮ ಇದಕ್ಕೆ ಪ್ರಮುಖ ಕಾರಣ. ಆರೋಗ್ಯ ಸಂಬAಧಿತ ಸಮಸ್ಯೆಗೆ ಪರಿಹಾರ ನೀಡುವ ಸಲುವಾಗಿ ಶಿಬಿರ ಆಯೋಜಿಸಲಾಗಿದ್ದು ಎಲ್ಲರೂ ಇದರ ಪ್ರಯೋಜನ ಪಡೆದು ಕೊಳ್ಳಬೇಕೆಂದು ಹೇಳಿದರು.

ಲಯನ್ಸ್ ಕ್ಲಬ್ ಕಾರ್ಯದರ್ಶಿ ಪೌಲ್ ಕ್ಷೇವಿಯರ್ ಮಾತನಾಡಿ, ಆರೋಗ್ಯ ಸಂಬAಧಿತ ಸಮಸ್ಯೆಗಳು ಇತ್ತೀಚೆಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ, ಇದಕ್ಕೆ ಪ್ರಸ್ತುತ ಜೀವನ ಶೈಲಿ ಹಾಗೂ ಆಹಾರ ಕ್ರಮ ಕಾರಣ. ನಿಯಮಿತ ತಪಾಸಣೆ, ಆರೋಗ್ಯಕರ ಜೀವನಶೈಲಿಯಿಂದ ನಮ್ಮನ್ನು ಆರೋಗ್ಯವಂತರಾಗಿ ಕಾಪಾಡಿಕೊಳ್ಳಬಹುದು ಎಂದರು.

ಲಯನ್ಸ್ ಕ್ಲಬ್ ಅಧ್ಯಕ್ಷ ಅಂಬಿ ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಧ್ಯವಾದಷ್ಟು ಬೇಗ ಸಮಸ್ಯೆಗಳನ್ನು ಪತ್ತೆಹಚ್ಚಲು ಮತ್ತು ತಡೆಗಟ್ಟಲು ನಿಯಮಿತವಾಗಿ ಆರೋಗ್ಯ ತಪಾಸಣೆಗಳನ್ನು ಮಾಡಿಕೊಳ್ಳುವುದು ಮುಖ್ಯವಾಗಿದೆ ಎಂದರು.

ಈ ಸಂದರ್ಭ ಲಯನ್ಸ್ ಕ್ಲಬ್ ಖಜಾಂಚಿ ಸುರೇಶ್, ಮಾಜಿ ಅಧ್ಯಕ್ಷರುಗಳಾದ ತ್ರಿಶು ಗಣಪತಿ, ಬಲ್ಲಚಂಡ ಅಶೋಕ್, ಸದಸ್ಯರುಗಳಾದ ಬಾನು ಕೃಷ್ಣಮೂರ್ತಿ, ಶಾಲಿನಿ, ಕ್ರೇಡೋ ಆಸ್ಪತ್ರೆಯ ಡಾ.ರಕ್ಷಾ ರೈ, ಗಂಗಮ್ಮ ಬಿ.ಡಿ. ಜಸ್ಲಿನಾ ಜಮಾಲ್, ಡಾ. ಶಂಷದ್ ಸೇರಿದಂತೆ ಹಲವರು ಇದ್ದರು. ಈ ಸಂದರ್ಭ ಬೇಟೋಳಿ ಗ್ರಾಮದಲ್ಲಿರುವ ಶಕ್ತಿ ವೃದ್ಧಾಶ್ರಮದಲ್ಲಿರುವ ವೃದ್ಧರನ್ನು ಲಯನ್ಸ್ ಕ್ಲಬ್ ಪದಾಧಿಕಾರಿಗಳು ತಮ್ಮ ಕಾರಿನಲ್ಲಿ ಕರೆದುಕೊಂಡು ಬಂದು ಅವರಿಗೆ ಆರೋಗ್ಯ ತಪಾಸಣೆ ಮಾಡಿಸಿದರು. ಸಮಾಜಮುಖಿ ಕಾರ್ಯಗಳಿಗೆ ಕೈಜೋಡಿಸುವುದರೊಂದಿಗೆ ನಿಮ್ಮೊಂದಿಗೆ ನಾವಿದ್ದೇವೆ ಎನ್ನುವ ಸಂದೇಶ ಸಾರಿದರು.