ಕೂಡಿಗೆ, ಡಿ. ೫: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ೨೦೨೫-೨೬ನೇ ಸಾಲಿನ ಗ್ರಾಮಸಭೆ ಅಧ್ಯಕ್ಷ ಭಾಸ್ಕರ ನಾಯಕ್ ಅಧ್ಯಕ್ಷತೆಯಲ್ಲಿ ಮಾರುಕಟ್ಟೆ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಪ್ರಮುಖವಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅನೇಕ ಕಡೆ ದಾರಿ ಒತ್ತುವರಿ ಆಗಿರುವ ಬಗ್ಗೆ ಅನೇಕ ಬಾರಿ ಗ್ರಾಮ ಪಂಚಾಯಿತಿ ಗಮನಕ್ಕೆ ತಂದರೂ ಸಹ ಕ್ರಮ ಕೈಗೊಂಡಿಲ್ಲ ಎಂಬ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
ಈ ಬಗ್ಗೆ ಕೂಡುಮಂಗಳೂರು ಗ್ರಾಮದ ಪುಟ್ಟರಾಜ್, ಮಂಜುನಾಥ, ಗೋವಿಂದ್ ರಾಜ್, ದಾಸ್ ಸೇರಿದಂತೆ ಹಲವಾರು ಗ್ರಾಮಸ್ಥರು ಸಭೆಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಯಿಂದ ಮಾಹಿತಿಯನ್ನು ಬಯಸಿದರು. ಕಂದಾಯ ಇಲಾಖೆಯ ಅಧಿಕಾರಿ ಈಗಾಗಲೇ ದಾರಿ ವಿಚಾರಕ್ಕೆ ಸಂಬAಧಿಸಿದAತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒತ್ತುವರಿ ಮಾಡಿಕೊಂಡಿರುವವರಿಗೆ ನೋಟೀಸ್ ನೀಡಲಾಗಿದೆ. ಸರ್ವೆ ಕಾರ್ಯವನ್ನು ಹಂತ ಹಂತವಾಗಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ನಂತರ ಸಭೆಯಲ್ಲಿ ಪಡಿತರ ವಸ್ತುಗಳ ವಿತರಣೆ ಮತ್ತು ಕಾಡಾನೆಗಳ ಹಾವಳಿ, ಆರೋಗ್ಯ, ಪಶುಪಾಲನೆ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಭಾಸ್ಕರ್ ನಾಯಕ್ ಮಾತನಾಡಿ, ಗ್ರಾಮ ಸಭೆಯಲ್ಲಿ ಚರ್ಚೆಗೊಂಡ ಎಲ್ಲಾ ವಿಷಯಗಳ ಬಗ್ಗೆ ಈಗಾಗಲೇ ದಾಖಲೆ ಮಾಡಲಾಗಿದೆ. ಅದರ ಮೂಲಕ ಸಂಬAಧಿಸಿದ ಇಲಾಖೆಯವರಿಗೆ ಹಂತ ಹಂತವಾಗಿ ಪತ್ರ ವ್ಯವಹಾರ ಮಾಡಲಾಗುವುದು. ಜೊತೆಯಲ್ಲಿ ಕಾರ್ಯವನ್ನು ಕೈಗೊಳ್ಳಲು ಕಾರ್ಯೋನ್ಮುಖರಾಗುತ್ತೇವೆೆ. ಗ್ರಾಮದ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಎಲ್ಲಾ ಕ್ರಮಗಳನ್ನು ಸದಸ್ಯರುಗಳ ಸಹಕಾರದೊಂದಿಗೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಉಪಾಧ್ಯಕ್ಷೆ ಶಶಿಕಲಾ, ನೋಡಲ್ ಅಧಿಕಾರಿ ಕೋಳಿ ಸಾಕಾಣಿಕೆ ಕೇಂದ್ರದ ಪಶುವೈದ್ಯಾಧಿಕಾರಿ ಡಾ. ನಾಗರಾಜ್, ಅಭಿವೃದ್ಧಿ ಅಧಿಕಾರಿ ಸಂತೋಷ್ ಸೇರಿದಂತೆ ಸದಸ್ಯರು ಹಾಜರಿದ್ದರು.