ಶನಿವಾರಸಂತೆ, ಡಿ. ೫: “ಮಕ್ಕಳ ಪ್ರತಿಭಾನ್ವೇಷಣೆಯೇ ಪ್ರತಿಭಾ ಕಾರಂಜಿ ಸ್ಪರ್ಧಾ ಕಾರ್ಯಕ್ರಮದ ಉದ್ದೇಶ’’ ಎಂದು ಕಿರಿಕೊಡ್ಲಿ ಮಠದ ಎಸ್.ಎಸ್. ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸದಾಶಿವ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.
ಕೊಡ್ಲಿಪೇಟೆಯ ಎಸ್.ಎಸ್. ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ಪ್ರಾಥಮಿಕ - ಪ್ರೌಢಶಾಲೆಯಲ್ಲಿ ನಡೆದ ಕೊಡ್ಲಿಪೇಟೆ ಹಾಗೂ ಬೆಸೂರು ಕ್ಲಸ್ಟರ್ ಮಟ್ಟದ ಪ್ರಾಥಮಿಕ - ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೊಡ್ಲಿಪೇಟೆ ವಲಯ ಸಂಪನ್ಮೂಲ ವ್ಯಕ್ತಿ ರವೀಶ್ ಹಾಗೂ ಬೆಸೂರು ವಲಯ ಸಂಪನ್ಮೂಲ ವ್ಯಕ್ತಿ ಎಸ್.ಎನ್. ಮುರಳಿಧರ್ ಪ್ರಾಸ್ತಾವಿಕ ನುಡಿಗಳನ್ನಾಡಿ, ಪ್ರತಿಭಾ ಕಾರಂಜಿ- ಕಲೋತ್ಸವ ಸ್ಪರ್ಧೆಗಳ ಬಗ್ಗೆ ಮಾಹಿತಿ ನೀಡಿದರು. ಎರಡೂ ಕ್ಲಸ್ಟರ್‌ಗಳ ೫೫೦ ವಿದ್ಯಾರ್ಥಿಗಳ ಪ್ರತಿಭಾ ಅನಾವರಣಕ್ಕೆ ಪ್ರತಿಭಾ ಕಾರಂಜಿ- ಕಲೋತ್ಸವ ಉತ್ತಮ ವೇದಿಕೆಯಾಗಿದ್ದು, ಶಾಲಾ ಆವರಣದಲ್ಲಿ ಹಬ್ಬದ ವಾತಾವರಣ ಮೂಡಿತ್ತು.
ಮುಖ್ಯ ಅತಿಥಿ ಭಾರತದ ಅತ್ಯುನ್ನತ ದರ್ಜೆಯ ಕಾಫಿ ಬೆಳೆಗಾರ ಪ್ರಶಸ್ತಿ ವಿಜೇತ ಐಗೂರಿನ ಐ.ಡಿ. ಚನ್ನಮಲ್ಲಿಕಾರ್ಜುನ್ (ಅರ್ಜುನ್) ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಬಂದು ಶಾಲಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು.ನಾವು ಮಾಡುವ ಕೆಲಸ ಯಾವುದೇ ಆಗಲೀ ಅದು ನಮ್ಮ ಹೃದಯ ಒಪ್ಪುವ ರೀತಿಯಲ್ಲಿಯೇ ಮಾಡಬೇಕು ಎಂದು ಸಲಹೆ ನೀಡಿದರು.
ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಮುಖ್ಯಶಿಕ್ಷಕ ಅಬ್ದುಲ್ ರಬ್ ಮಾತನಾಡಿ, ಪ್ರತಿಭಾ ಕಾರಂಜಿ ಸ್ಪರ್ಧೆಯು ಮಕ್ಕಳಲ್ಲಿ ಶಿಕ್ಷಣ, ಮನೋರಂಜನೆ ಹಾಗೂ ಪ್ರಗತಿಗೆ ಉತ್ತೇಜನ ನೀಡುವುದರೊಂದಿಗೆ ಮಕ್ಕಳ ಸುಪ್ತ ಪ್ರತಿಭೆ ಗುರುತಿಸಲು ಅನುಕೂಲವಾಗಲಿದೆ ಎಂದರು.
ಎಸ್.ಎಸ್. ಆಂಗ್ಲ ಮಾಧ್ಯಮ ಶಾಲೆಯಲ್ಲಿ ೨೦೨೪-೨೫ನೇ ಸಾಲಿನಲ್ಲಿ ಅತಿ ಹೆಚ್ಚು ಅಂಕಪಡೆದ ನಾಲ್ವರು ವಿದ್ಯಾರ್ಥಿಗಳಿಗೆ ಪದಕ ನೀಡಿ ಪುರಸ್ಕರಿಸಲಾಯಿತು. ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತರಾದ ಮುಖ್ಯಶಿಕ್ಷಕಿ ಕೆ.ಎಸ್. ತನುಜಾ, ಎಂ.ಎಸ್. ಅಬ್ದುಲ್ ರಬ್ ಹಾಗೂ ತಾಲೂಕುಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತರಾದ ಎನ್.ಎಂ.ಚAದ್ರಶೇಖರ್, ಸುನೀತಾ ಡಿಸೋಜಾ ಮತ್ತು ಸಾವಿತ್ರಿ ಬಾಯಿ ಫುಲೆ ರಾಜ್ಯಮಟ್ಟದ ಪ್ರಶಸ್ತಿ ವಿಜೇತ ಶಿಕ್ಷಕಿ ರಿಜ್ವಾನಾ ಬಾನು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಮಾರೋಪ ಸಮಾರಂಭದಲ್ಲಿ ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಕೃಷ್ಣಪ್ಪ ಪಾಲ್ಗೊಂಡು ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ರಾಜ್ಯ ಶಿಕ್ಷಕರ ಸಂಘದ ಉಪಾಧ್ಯಕ್ಷ ಮಂಜುನಾಥ್, ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಎಸ್.ಎನ್ .ಸುರೇಶ್, ಕಿರಿಕೊಡ್ಲಿ ಮಠದ ಎಸ್.ಜಿ.ಎಸ್. ವಿದ್ಯಾಪೀಠದ ಕಾರ್ಯದರ್ಶಿ ಕೆ.ಪಿ. ನಂಜುAಡಯ್ಯ, ಕೊಡ್ಲಿಪೇಟೆ ವಲಯದ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ಮುಖಂಡರು ಉಪಸ್ಥಿತರಿದ್ದರು. ಪ್ರಾಂಶುಪಾಲೆ ತನುಜಾ ಸ್ವಾಗತಿಸಿ, ಮುಖ್ಯಶಿಕ್ಷಕ ಎನ್.ಎಂ. ಚಂದ್ರಶೇಖರ್ ನಿರೂಪಿಸಿದರು. ವಿದ್ಯಾರ್ಥಿಗಳು ಪ್ರಬಂಧ, ಕನ್ನಡ ಕಂಠಪಾಠ, ಸುಗಮ ಸಂಗೀತ, ಜಾನಪದ ಗೀತೆ, ಧಾರ್ಮಿಕ ಪಠಣ, ಮಿಮಿಕ್ರಿ, ಭಾಷಣ, ರಸಪ್ರಶ್ನೆ, ರಂಗೋಲಿ, ಆಶುಭಾಷಣ, ಜನಪದ ನೃತ್ಯ, ಸಾಂಪ್ರದಾಯಿಕ ನೃತ್ಯ, ಭರತನಾಟ್ಯ ಸ್ಪರ್ಧೆಗಳಲ್ಲಿ ಭಾಗವಹಿಸಿ, ಪೈಪೋಟಿ ನಡೆಸಿ, ಪ್ರತಿಭೆ ಮೆರೆದರು. ಮಣ್ಣಿನಿಂದ ಮಾದರಿ ತಯಾರಿಕಾ ಸ್ಪರ್ಧೆಯಲ್ಲಿ ೧೨ಕ್ಕೂ ಅಧಿಕ ಮಕ್ಕಳು ಭಾಗವಹಿಸಿ ಜಿಂಕೆ, ಮೊಸಳೆ, ಹಾವು ಇತ್ಯಾದಿಗಳ ಮಾದರಿ ತಯಾರಿಸಿ ಗಮನ ಸೆಳೆದರು.v