ನಾಪೋಕ್ಲು, ಡಿ. ೫: ನಿಸ್ವಾರ್ಥ ಸೇವೆಯನ್ನು ಮಾಡುತ್ತಾ ಬರುತ್ತಿರುವ ಸ್ಥಳೀಯ ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಂಡವನ್ನು ಸನ್ಮಾನಿಸಿ, ಗೌರವಿಸಲಾಯಿತು.
ಸ್ಥಳೀಯ ಸರಕಾರಿ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸದ ಕಾರ್ಯಕ್ರಮದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಂಡದ ನಾಯಕಿ ಬಾಳೆಯಡ ದಿವ್ಯ ಮಂದಪ್ಪ ಮತ್ತು ಅವರ ತಂಡವನ್ನು ಕಾಲೇಜು ವತಿಯಿಂದ ವೇದಿಕೆಯಲ್ಲಿದ್ದ ಗಣ್ಯರು ಸನ್ಮಾನಿಸಿ, ಗೌರವಿಸಿದರು.
ಕಾಲೇಜು ಪ್ರಾಂಶುಪಾಲೆ ಪಲ್ಲವಿ ಹೆಚ್.ಸಿ. ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು, ನಿವೃತ್ತ ಉಪ ಪ್ರಾಂಶುಪಾಲೆ ಕಾಂಡAಡ ಉಷಾ ಜೋಯಪ್ಪ ಹಾಗೂ ಕಾಲೇಜು ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.