ಗೋಣಿಕೊಪ್ಪಲು, ಡಿ. ೭: ಪ್ರತಿಷ್ಠಿತ ಪೊನ್ನಂಪೇಟೆಯ ಕೂರ್ಗ್ ಇನ್ಸಿ÷್ಟಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಡಿ.೯ರಂದು ಪ್ರಾಜೆಕ್ಟ್ ಎಕ್ಸಿಬಿಷನ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕಾಲೇಜಿನ ೧೫೦ಕ್ಕೂ ಅಧಿಕ ಇಂಜಿನಿಯರಿAಗ್ ವಿದ್ಯಾರ್ಥಿಗಳು ತಾವು ತಯಾರಿಸಿದ ವಿವಿಧ ರೀತಿಯ ಪ್ರಾಜೆಕ್ಟ್ಗಳನ್ನು ಅನಾವರಣಗೊಳಿಸಲಿದ್ದಾರೆ.
ಸಿ.ಐ.ಟಿ. ಕಾಲೇಜಿನ ಇಂಜಿನಿಯರಿAಗ್ ವಿಭಾಗಗಳಾದ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿAಗ್, ಸಿವಿಲ್ ಇಂಜಿನಿಯರಿAಗ್, ಎಲೆಕ್ಟಾçನಿಕ್ಸ್ ಆ್ಯಂಡ್ ಕಮ್ಯೂನಿಕೇಷನ್ ಇಂಜಿನಿಯರಿAಗ್ ಮತ್ತು ಮೆಕ್ಯಾನಿಕಲ್ ಇಂಜಿನಿಯರಿAಗ್, ಸೈಬರ್ ಸೆಕ್ಯೂರಿಟಿ ಇಂಜಿನಿಯರಿAಗ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮಿಷನ್ ಲರ್ನಿಂಗ್ ಇಂಜಿನಿಯರಿAಗ್ ಹಾಗೂ ಡೇಟಾ ಸೈನ್ಸ್ ಇಂಜಿನಿಯರಿAಗ್ ಸೇರಿದಂತೆ ಸಿ.ಐ.ಟಿ. ಕಾಲೇಜಿನ ಏಳು ಇಂಜಿನಿಯರಿAಗ್ ವಿಭಾಗಗಳ ವಿದ್ಯಾರ್ಥಿಗಳು ತಮ್ಮ ಸಂಶೋಧನಾ ಪ್ರವೃತ್ತಿಯಿಂದ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ಸಮಾಜಕ್ಕೆ ಉಪಯುಕ್ತವಾದ ಪ್ರಾಜೆಕ್ಟ್ಗಳನ್ನು ಸಿದ್ದಪಡಿಸಿದ್ದಾರೆ.
ಈ ಪ್ರಾಜೆಕ್ಟ್ಗಳನ್ನು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ವೀಕ್ಷಣೆ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಈ ಎಕ್ಸಿಬಿಷನ್ ಸ್ಪರ್ಧೆಯನ್ನು ಕೊಡವ ಎಜುಕೇಷನ್ ಸೊಸೈಟಿಯ ಅಧ್ಯಕ್ಷರಾದ ಡಾ.ಎಂ.ಸಿ. ಕಾರ್ಯಪ್ಪ ಮತ್ತು ಕಾರ್ಯದರ್ಶಿ ಸಿ.ಪಿ. ರಾಕೇಶ್ ಪೂವಯ್ಯ ಉದ್ಘಾಟಿಸಲಿದ್ದಾರೆ.
ಈ ಪ್ರಾಜೆಕ್ಟ್ ಎಕ್ಸಿಬಿಷನನ್ನು ವೀಕ್ಷಿಸಲು ಸಾರ್ವಜನಿಕರಿಗೆ ಮತ್ತು ಪಿ.ಯು. ವಿದ್ಯಾರ್ಥಿಗಳಿಗೆ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಮುಕ್ತವಾದ ಅವಕಾಶವನ್ನು ಸಿ.ಐ.ಟಿ. ಕಾಲೇಜು ಕಲ್ಪಿಸಿಕೊಟ್ಟಿದೆ. ಕಾರ್ಯಕ್ರಮದ ಸಂಯೋಜಕರಾಗಿ ಸಂಸ್ಥೆಯ ಡಾ.ಕಿಶನ್ ಕರುಂಬಯ್ಯ ಹಾಗೂ ಮಾಹಿತಿ ಹಂಚಿಕೆದಾರರಾಗಿ ಡಾ.ಯತಿರಾಜ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳು ವಿಶೇಷ ಆಸಕ್ತಿ ವಹಿಸಿ ಈ ಪ್ರಾಜೆಕ್ಟ್ಗಳನ್ನು ಪ್ರದರ್ಶನ ಮಾಡಲಿದ್ದಾರೆ. ಇದರ ಪ್ರಯೋಜನವನ್ನು ಸರ್ವರು ಸದುಪಯೋಗಪಡಿಸಿಕೊಳ್ಳಲು ಸಿ.ಐ.ಟಿ. ಕಾಲೇಜಿನ ಪ್ರಾಂಶುಪಾಲ ಡಾ.ಎಂ. ಬಸವರಾಜ್ ತಿಳಿಸಿದ್ದಾರೆ.