ಮಡಿಕೇರಿ, ಡಿ. ೯ : ೨೦೨೪-೨೫ ನೇ ಸಾಲಿಗೆ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಆದರ್ಶವಾಗಿ ಸೇವೆ ಸಲ್ಲಿಸಿರುವ ವ್ಯಕ್ತಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ೨೦೨೫-೨೬ನೇ ಸಾಲಿಗೆ ಮಹಿಳಾ ಅಭಿವೃದ್ಧಿ, ಕ್ರೀಡೆ, ಶಿಕ್ಷಣ, ಕಲೆ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಜನವರಿ ೧, ೨೦೨೫ ರಿಂದ ಡಿಸೆಂಬರ್ ೩೧, ೨೦೨೫ರ ಅವಧಿಯಲ್ಲಿ ಶೌರ್ಯ, ಸಾಹಸ ಪ್ರದರ್ಶಿಸಿ ಇತರರ ಪ್ರಾಣ ರಕ್ಷಣೆ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ರಕ್ಷಿಸಲು ಸಹಕಾರಿಯಾಗಿರುವ ಪ್ರಕರಣಗಳಿದ್ದಲ್ಲಿ ಅಂತಹ ಮಹಿಳೆಯರು ವೀರ ಮಹಿಳೆ ಪ್ರಶಸ್ತಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಸ್ವಯಂ ಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು ಮಹಿಳೆಯರ ಅಭಿವೃದ್ಧಿಗಾಗಿ ಕನಿಷ್ಠ ೫ ವರ್ಷಗಳ ಸೇವೆ ಸಲ್ಲಿಸಿರಬೇಕು. ಪ್ರಶಸ್ತಿಗೆ ಆಯ್ಕೆ ಮಾಡುವಾಗ ಸಂಸ್ಥೆ ಹಾಗೂ ವ್ಯಕ್ತಿ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಕೈಗೊಂಡ ಕಾರ್ಯಕ್ರಮಗಳ ಮತ್ತು ಇತರೆ ಕ್ಷೇತ್ರಗಳಾದ ಕ್ರೀಡೆ, ಕಲೆ, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ವ್ಯಕ್ತಿಗಳು ಕೈಗೊಂಡ ಕಾರ್ಯಕ್ರಮಗಳ ನಿರ್ವಹಣೆಯ ಗುಣಮಟ್ಟವನ್ನು ಆಧಾರವಾಗಿಟ್ಟುಕೊಳ್ಳಲಾಗುತ್ತದೆ.

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ವೇತನ ಪಡೆಯುತ್ತಿರುವ ವ್ಯಕ್ತಿಗಳು ಅರ್ಹರಾಗಿರುವುದಿಲ್ಲ. ಪ್ರಶಸ್ತಿಗೆ ಬರುವ ಅರ್ಜಿಗಳ ಪರಿಶೀಲನೆ ಮತ್ತು ಆಯ್ಕೆಗೆ ಸಂಬAಧಿಸಿದAತೆ ಸಮಿತಿಯ ತೀರ್ಮಾನವೇ ಅಂತಿಮವಾಗಿದೆ. ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಅಂತರರಾಷ್ಟಿçÃಯ ಮಹಿಳಾ ದಿನಾಚರಣೆಯಂದು ಅಥವಾ ಸರ್ಕಾರವು ನಿಗದಿಪಡಿಸುವ ದಿನಾಂಕ ಹಾಗೂ ಸ್ಥಳಗಳಲ್ಲಿ ಏರ್ಪಡಿಸಲಾಗುವುದು. ಇದಕ್ಕೆ ಸಂಬAಧಿಸಿದ ಅರ್ಜಿ ನಮೂನೆಯನ್ನು ಉಪ ನಿರ್ದೇಶಕರ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‌ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ ಇಲ್ಲಿಂದ ಪಡೆದು ಫೆಬ್ರವರಿ ೩ ರೊಳಗಾಗಿ ಈ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: ೯೪೮೨೧೯೪೧೦೫, ೦೮೨೭೨-೨೨೮೦೧೦ ಅನ್ನು ಸಂಪರ್ಕಿಸಬಹುದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್ ತಿಳಿಸಿದ್ದಾರೆ.