ಸೋಮವಾರಪೇಟೆ, ಡಿ. ೯: ಕನ್ನಡ ಸಿರಿ ಸ್ನೇಹ ಬಳಗದ ನೇತೃತ್ವದಲ್ಲಿ, ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬಂಕಿಮಚAದ್ರ ಚಟರ್ಜಿ ರಚಿತ ವಂದೇ ಮಾತರಂ ಗೀತೆಗೆ ೧೫೦ ವರ್ಷ, ಹುಯಿಲುಗೋಳ ನಾರಾಯಣರಾಯರು ರಚಿತ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಹಾಗೂ ವಿಶ್ವಮಾನವ ಕುವೆಂಪು ರಚಿಸಿದ ಜಯ ಭಾರತ ಜನನಿಯ ತನುಜಾತೆ ಗೀತೆಯು ೧೦೦ ವರ್ಷಗಳನ್ನು ಪೂರೈಸಿರುವ ನೆನಪಿಗಾಗಿ ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದ ಶತಕಂಠದಲ್ಲಿ ಗೀತ ಸಂಗಮ ಕಾರ್ಯಕ್ರಮದಲ್ಲಿ, ಸ್ವಾತಂತ್ರö್ಯ ಹೋರಾಟ ಸಂದರ್ಭ ಗಾಂಧೀಜಿ ಅವರಿಗೆ ಆಶ್ರಯ ನೀಡಿದ್ದ ಬೇಳೂರು ಗ್ರಾಮದ ಕುಟುಂಬ ಸದಸ್ಯರನ್ನು ಸನ್ಮಾನಿಸಲಾಯಿತು. ಸ್ವಾತಂತ್ರö್ಯಪೂರ್ವದಲ್ಲಿ ಮಹಾತ್ಮ ಗಾಂಧೀಜಿ ಅವರು ಸೋಮವಾರಪೇಟೆಗೆ ಆಗಮಿಸಿದ್ದ ಸಂದರ್ಭ ಬೇಳೂರಿನಲ್ಲಿರುವ ಮನೆಯೊಂದರಲ್ಲಿ ತಂಗಿದ್ದರು. ಗಾಂಧೀಜಿ ಅವರಿಗೆ ಆತಿಥ್ಯ ಒದಗಿಸಿದ ಕುಟುಂಬದ ಸದಸ್ಯರಾದ ಗುರುಮಲ್ಲೇಶ್ ಅವರನ್ನು ಕನ್ನಡ ಸಿರಿ ಸ್ನೇಹ ಬಳಗ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಅಭಿನಂದಿಸಲಾಯಿತು.

ಇದೇ ಸಂದರ್ಭ ಕನ್ನಡಪರ ಕಾರ್ಯಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಅವರನ್ನೂ ಸಂಘಟನೆಗಳ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭ ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್, ನಿವೃತ್ತ ಪ್ರಾಂಶುಪಾಲ ಶಿವಪ್ಪ, ನಿವೃತ್ತ ಚಿತ್ರಕಲಾ ಶಿಕ್ಷಕ ಊರಾ ನಾಗೇಶ್, ನಿವೃತ್ತ ಪ್ರಾದ್ಯಾಪಕಿ ತಿಲೋತ್ತಮೆ ನಂದಕುಮಾರ್, ಕೊಡಗು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷ ಎಸ್.ಎ. ಮುರಳೀಧರ್, ಸ್ನೇಹ ಬಳಗದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಜೆ. ಜವರಪ್ಪ, ಕಾರ್ಯದರ್ಶಿ ಪ್ರೇಮಾ, ನ.ಲ. ವಿಜಯ, ಮಹಿಳಾ ಸಮಾಜದ ಅಧ್ಯಕ್ಷೆ ವಿಜಯಲಕ್ಷಿö್ಮÃ ಸುರೇಶ್ ಸೇರಿದಂತೆ ಇತರರು ಇದ್ದರು.