ಮಡಿಕೇರಿ, ಡಿ. ೧೦: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಕೊಡಗು ಇವರ ವತಿಯಿಂದ ೨೦೨೫-೨೬ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು ಯೋಜನೆಯಡಿ ಸಾಲ ಸೌಲಭ್ಯ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ವಿದ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆಇಎ/ಸಿಇಟಿ/ನೀಟ್ ಮುಖಾಂತರ ಎಂಬಿಬಿಎಸ್, ಬಿ.ಡಿ.ಎಸ್, ಬಿ.ಇ/ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ ಆಯುಷ್, ಫಾರ್ಮಸಿ, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ವ್ಯಾಸಂಗಗಳಿಗೆ ಆಯ್ಕೆಯಾಗಿ ೨/೩ ಅಥವಾ ನಂತರದ ವರ್ಷಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಾಲ ನೀಡಲಾಗುತ್ತದೆ. ಅರಿವು (ರಿನಿವಲ್) ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.