ವೀರಾಜಪೇಟೆ, ಡಿ. ೧೧: ಪ್ರೊ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಣ ದಿನಾಚರಣೆ ವೀರಾಜಪೇಟೆಯಲ್ಲಿ ನಡೆಯಿತು.

ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಅವರು ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಮೇಣದ ಬತ್ತಿಗಳನ್ನು ಹಚ್ಚಿ ಗೌರವ ನಮನ ಸಲ್ಲಿಸಿದರು.

ನಂತರ ಮಾತನಾಡಿದ ಅವರು, ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿರುವ ಸಂದೇಶಗಳಾದ ಶಿಕ್ಷಣ, ಸಂಘಟನೆ ಮತ್ತು ಹೋರಾಟವು ನಮ್ಮ ಗುರಿಯಾಗಬೇಕು. ಅವರ ಹೋರಾಟದ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕು, ಸಂವಿಧಾನದ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದರು.

ದಲಿತ ಸಂಘರ್ಷ ಸಮಿತಿಯ ಸದಸ್ಯರಾದ ವೈ.ಬಿ. ಗಣೇಶ್, ಲವ, ಗಣೇಶ್, ಜಯಲಕ್ಷಿö್ಮ ಮತ್ತಿತರರು ಉಪಸ್ಥಿತರಿದ್ದು ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಿದರು.