ಸೋಮವಾರಪೇಟೆ, ಡಿ. ೧೧: ಕೃಷಿಕರು ಸಾಗುವಳಿ ಮಾಡಿಕೊಂಡಿರುವ ಸಿ ಮತ್ತು ಡಿ ಜಾಗವನ್ನು ಅರಣ್ಯಕ್ಕೆ ಒಳಪಡಿಸುವ ಪ್ರಕ್ರಿಯೆಗೆ ಸಂಬAಧಿಸಿದAತೆ ಉದ್ಭವಿಸಿರುವ ಸಮಸ್ಯೆಗಳ ಬಗ್ಗೆ, ವಸ್ತುಸ್ಥಿತಿಯ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರ ರಚಿಸಿರುವ ವಿಶೇಷ ಸಮಿತಿಯ ವರದಿ ಸಲ್ಲಿಕೆಯಾಗುವವರೆಗೆ ಅರಣ್ಯ ಹಾಗೂ ಕಂದಾಯ ಇಲಾಖೆ ರೈತರ ಜಮೀನನ್ನು ಸರ್ವೆ ಮಾಡಬಾರದು ಎಂದು ರೈತ ಹೋರಾಟ ಸಮಿತಿ ಆಗ್ರಹಿಸಿದೆ.
ಸೋಮವಾರಪೇಟೆ ತಾಲೂಕಿನ ಶಾಂತಳ್ಳಿ ಹೋಬಳಿ ವ್ಯಾಪ್ತಿಗೆ ಒಳಪಡುವ ಬೆಟ್ಟದಳ್ಳಿ ಗ್ರಾಮದಲ್ಲಿ ಡೀಮ್ಡ್ ಫಾರೆಸ್ಟ್ ಜಂಟಿ ಸರ್ವೆ ಕಾರ್ಯವನ್ನು ತಾ. ೧೬ರಂದು ಹಾಗೂ ಕುಮಾರಳ್ಳಿ ಗ್ರಾಮದಲ್ಲಿ ತಾ. ೧೭ರಂದು ಜಂಟಿ ಸರ್ವೆ ನಡೆಸಲು ದಿನಾಂಕ ನಿಗದಿಗೊಳಿಸಿ ತಹಶೀಲ್ದಾರ್ ಅಧಿಕೃತ ಪತ್ರವನ್ನು ಹೊರಡಿಸಿದ್ದು, ಇದಕ್ಕೆ ರೈತ ಹೋರಾಟ ಸಮಿತಿ ಅಧ್ಯಕ್ಷ ಚಕ್ರವರ್ತಿ ಸುರೇಶ್ ವಿರೋಧ ವ್ಯಕ್ತಪಡಿಸಿದ್ದಾರೆ.ತಾ. ೧೬ ಮತ್ತು ೧೭ರಂದು ಶಾಂತಳ್ಳಿ ಹೋಬಳಿಯ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಟದಳ್ಳಿ ಹಾಗೂ ಕುಮಾರಳ್ಳಿ ಗ್ರಾಮದಲ್ಲಿ ಡೀಮ್ಡ್ ಫಾರೆಸ್ಟ್ ಗುರುತಿಸುವಿಕೆಯ ಸರ್ವೆ ೪ಐದನೇ ಪುಟಕ್ಕೆ
ಕಾರ್ಯಕ್ಕೆ ಕ್ರಮವಹಿಸುವಂತೆ ತಾಲೂಕು ತಹಶೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ ಅವರು ತಾ.ಪಂ. ಕಾರ್ಯನಿರ್ವಹಣಾಧಿಕಾರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ, ಭೂ ದಾಖಲೆಗಳ ಸಹಾಯಕ ನಿರ್ದೇಶಕರು, ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಉಪ ತಹಶೀಲ್ದಾರ್, ಕಂದಾಯ ಪರಿವೀಕ್ಷಕರು, ರೈತ ಹೋರಾಟ ಸಮಿತಿಯ ಅಧ್ಯಕ್ಷ ಸುರೇಶ್ ಚಕ್ರವರ್ತಿ ಅವರುಗಳಿಗೆ ಅಧಿಕೃತ ಪತ್ರ ರವಾನಿಸಿದ್ದಾರೆ.
ಜಂಟಿ ಸರ್ವೆ ಕಾರ್ಯಕ್ಕೆ ದಿನಾಂಕ ನಿಗದಿಪಡಿಸಿದ್ದು, ಈ ಸಂಬAಧ ಗ್ರಾಮಸ್ಥರಿಗೆ ಹೆಚ್ಚಿನ ಮಾಹಿತಿ ನೀಡಿ ಧ್ವನಿವರ್ಧಕ ಮೂಲಕ ಸ್ಥಳೀಯವಾಗಿ ಪ್ರಚಾರ ಪಡಿಸಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕ್ರಮವಹಿಸಬೇಕೆಂದು ಸೂಚನೆ ನೀಡಲಾಗಿದೆ.
ಈ ಕ್ರಮಕ್ಕೆ ರೈತ ಹೋರಾಟ ಸಮಿತಿ ಆಕ್ಷೇಪ ವ್ಯಕ್ತಪಡಿಸಿದ್ದು, ಒಂದು ವೇಳೆ ಸರ್ವೆ ಕಾರ್ಯಕ್ಕೆ ಅಧಿಕಾರಿಗಳು ಮುಂದಾದರೆ ರೈತರಿಂದ ತೀವ್ರ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ಸಿ ಮತ್ತು ಡಿ ಲ್ಯಾಂಡ್ ಸಮಸ್ಯೆಯನ್ನು ಬಗೆಹರಿಸುವಂತೆ ಕಳೆದ ಒಂದೂವರೆ ವರ್ಷದಿಂದ ರೈತ ಹೋರಾಟ ಸಮಿತಿಯು ರೈತ ಸಂಘದ ಸಹಕಾರದೊಂದಿಗೆ, ಗ್ರಾಮಾಭಿವೃದ್ಧಿ ಸಮಿತಿಗಳು, ಸಾವಿರಾರು ರೈತರನ್ನು ಒಳಗೊಂಡAತೆ ಪ್ರತಿಭಟನೆ, ಧರಣಿ, ಬಂದ್ ನಡೆಸಿ ಸರ್ಕಾರದ ಗಮನ ಸೆಳೆಯಲಾಗಿದೆ. ಇತ್ತೀಚೆಗಷ್ಟೇ ಸರ್ಕಾರ ಸಿ ಮತ್ತು ಡಿ ಜಾಗದ ಸಮಸ್ಯೆಯ ಬಗ್ಗೆ ಗಮನ ಹರಿಸಿದ್ದು, ಪ್ರಾಯೋಗಿಕವಾಗಿ ಕೊಡಗು ಜಿಲ್ಲೆಯಲ್ಲಿ ವಿಶೇಷ ಸಮಿತಿ ರಚಿಸಿ, ವಾಸ್ತವಾಂಶದ ವರದಿ ನೀಡಲು ಆದೇಶಿಸಿದೆ.
ನಿವೃತ್ತ ಐಎಎಸ್ ಅಧಿಕಾರಿ, ಹೆಚ್ಚುವರಿ ಅಡ್ವೋಕೇಟ್ ಜನರಲ್, ನಿವೃತ್ತ ಡಿಸಿಎಫ್, ನಿವೃತ್ತ ತಹಶೀಲ್ದಾರ್‌ರನ್ನು ಒಳಗೊಂಡAತೆ ಸಮಿತಿ ರಚಿಸಿದ್ದು, ಈ ಸಮಿತಿ ಕೊಡಗಿನಲ್ಲಿ ಸಿ ಮತ್ತು ಡಿ ಲ್ಯಾಂಡ್‌ಗೆ ಸಂಬAಧಿಸಿದAತೆ ವಸ್ತುಸ್ಥಿತಿಯ ಬಗ್ಗೆ ಅಧ್ಯಯನ ನಡೆಸಿ, ಉದ್ಭವಿಸಿರುವ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ಸಲಹಾತ್ಮಕ ಅಂಶಗಳೊAದಿಗೆ ಅನುಪಾಲನಾ ವರದಿ ಸರ್ಕಾರಕ್ಕೆ ಸಲ್ಲಿಸಬೇಕಿದೆ. ಈ ಸಮಿತಿಯು ಪ್ರಕ್ರಿಯೆ ಪೂರ್ಣಗೊಳಿಸುವವರೆಗೆ ಇನ್ನಿತರ ಇಲಾಖೆಗಳು ಯಾವುದೇ ಸರ್ವೆ ಕಾರ್ಯಕ್ಕೆ ಮುಂದಾಗಬಾರದು ಎಂದು ಸುರೇಶ್ ಚಕ್ರವರ್ತಿ ಒತ್ತಾಯಿಸಿದ್ದಾರೆ.
ಈ ಬಗ್ಗೆ ತಾಲೂಕು ತಹಶೀಲ್ದಾರ್ ಅವರಿಗೆ ಮನವಿ ಮಾಡಲಾಗಿದ್ದು, ಯಾವುದೇ ಕಾರಣಕ್ಕೂ ಸರ್ವೆ ಕಾರ್ಯ ಕೈಗೊಳ್ಳಬಾರದು ಎಂದು ಗಮನ ಸೆಳೆಯಲಾಗಿದೆ. ಇದರೊಂದಿಗೆ ಅರಣ್ಯ ಇಲಾಖೆಯಿಂದಲೂ ಪ್ರತ್ಯೇಕ ಸರ್ವೆ ನಡೆಸಲು ಅವಕಾಶ ಕಲ್ಪಿಸಬಾರದು ಎಂದು ಒತ್ತಾಯಿಸಿದ್ದೇವೆ. ವಿಶೇಷ ಸಮಿತಿಯ ಅನುಪಾಲನಾ ವರದಿಗೂ ಮುನ್ನ ಸರ್ವೆಗೆ ಮುಂದಾದರೆ ರೈತರಿಂದ ತೀವ್ರ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂದು ರೈತ ಹೋರಾಟ ಸಮಿತಿ ಅಧ್ಯಕ್ಷ ಸುರೇಶ್ ಚಕ್ರವರ್ತಿ ಅವರು ‘ಶಕ್ತಿ’ಯೊಂದಿಗೆ ಪ್ರತಿಕ್ರಿಯಿಸಿದ್ದಾರೆ.