ಮಡಿಕೇರಿ, ಡಿ. ೧೧: ಪ್ರಧಾನಿ ನರೇಂದ್ರ ಮೋದಿ ಕುರಿತಾಗಿ ಅವಹೇಳನಕಾರಿ ವೀಡಿಯೋ ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ಮತ್ತೊರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಡಿಕೇರಿಯ ಅಜಾದ್ ನಗರ ನಿವಾಸಿ ಮೊಹಮ್ಮದ್ ರಿಯಾಜ್ (೨೬) ಬಂಧಿತ ಆರೋಪಿ. ನಗರದ ಸ್ಪೆöÊಸಸ್ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಶ್ಲೀಲ ಪದಗಳಿಂದ ನಿಂದಿಸಿ ಅದನ್ನು ವೀಡಿಯೋ ಮಾಡಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೆ ಬಿಜೆಪಿ ನಗರ ಯುವಮೋರ್ಚಾ ನಗರ ಠಾಣೆಯಲ್ಲಿ ದೂರು ನೀಡಿತ್ತು. ಬಳಿಕ ಮಡಿಕೇರಿಯ ಎಂ.ಇ. ಫಾಹದ್, ೪ನಾಲ್ಕನೇ ಪುಟಕ್ಕೆ

೪ನಾಲ್ಕನೇ ಪುಟಕ್ಕೆ

ಎಂ.ಎA. ಸಮೀರ್, ಎಂ.ಹೆಚ್. ಬಾಸಿಲ್ ಎಂಬವರನ್ನು ಬಂಧಿಸಲಾಗಿತ್ತು. ಇದೀಗ ಈ ಪ್ರಕರಣದ ಮತ್ತೋರ್ವ ಆರೋಪಿ ಮೊಹಮ್ಮದ್ ರಿಯಾಜ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅಲ್ಲದೆ ೪ ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸಮುದಾಯ, ವ್ಯಕ್ತಿಗಳ ವಿರೋಧವಾಗಿ ಅವಹೇಳನಕಾರಿಯಾಗಿ ಅವಾಚ್ಯ ಶಬ್ದಗಳನ್ನು ಬಳಸಿ ಪೋಸ್ಟ್ಗಳನ್ನು ಮಾಡಿ ಶಾಂತಿ ಕದಡುವ ಪ್ರಯತ್ನ ಮಾಡದಂತೆ ಜಿಲ್ಲಾ ಪೊಲೀಸ್ ಈಗಾಗಲೇ ಸೂಚನೆ ನೀಡಿದ್ದು, ಯಾವುದೇ ಸಮುದಾಯ, ವ್ಯಕ್ತಿಗಳ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ಅವಹೇಳನಕಾರಿ ಸಂದೇಶಗಳನ್ನು ಹರಿಬಿಟ್ಟು, ಕೋಮು ಸೌಹಾರ್ದತೆಯನ್ನು ಕದಡುವ ದುರುದ್ದೇಶದಿಂದ ಸುಳ್ಳು ಸುದ್ದಿಯ ಪೋಸ್ಟ್ಗಳನ್ನು ಹರಿಬಿಟ್ಟು ಅಪಪ್ರಚಾರ ಮಾಡುವ, ಆತಂಕ ಸೃಷ್ಟಿಸುವ ವ್ಯಕ್ತಿಗಳ ವಿರುದ್ಧ ಹಾಗೂ ಯಾವುದೇ ರಾಜಕೀಯ ಪಕ್ಷಗಳನ್ನು ವಿಮರ್ಶಿಸುವ, ಟೀಕಿಸುವ ಸಂದರ್ಭ ರಾಜಕೀಯ ವ್ಯಕ್ತಿಗಳ ಅವರ ಕುಟುಂಬದವರನ್ನು ವೈಯಕ್ತಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುವವವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಎಚ್ಚರಿಸಿದ್ದಾರೆ.