ಕಡಂಗ, ಡಿ. ೧೨: ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂಗದ ಶಾದಿ ಮಹಲ್ ಸಭಾಂಗಣದಲ್ಲಿ ಸಂಜೀವಿನಿ ಒಕ್ಕೂಟದ ವತಿಯಿಂದ ಸಂಜೀವಿನಿ ಸಂತೆ ಮೇಳವನ್ನು ಆಯೋಜಿಸಲಾಯಿತು.

ಸಂತೆ ಮೇಳವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೌಶಿ ಕಾವೇರಮ್ಮ ಉದ್ಘಾಟಸಿ ಮಾತನಾಡಿದ ಅವರು, ಸಂಜೀವಿನಿ ಒಕ್ಕೂಟದಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಚಿತ್ವವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ.

ಇಂತಹ ಮೇಳವನ್ನು ಆಯೋಜಿಸಿರುವುದು ಶ್ಲಾಘನೀಯ. ತಿಂಗಳಿಗೊಮ್ಮೆ ಇಂತಹ ಸಂತೆಯನ್ನು ಆಯೋಜಿಸಿದರೆ ಸಾರ್ವಜನಿಕರಿಗೆ ಸಹಕಾರಿಯಾಗುತ್ತದೆ ಎಂದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ ಮಾತನಾಡಿ, ಸಂಜೀವಿನಿ ಒಕ್ಕೂಟದ ಸಂತೆ ಮೇಳದಿಂದ ಮಹಿಳೆಯರಿಗೆ ಉದ್ಯೋಗಾವಕಾಶವನ್ನು ಕಲ್ಪಿಸಲಾಗುವುದು ಮತ್ತು ಆರ್ಥಿಕ ಸಹಾಯ ಹೊಂದಲು ಸಹಕಾರಿಯಾಗಲಿದೆ ಎಂದು ನುಡಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೆಬಾಸ್ಟಿನ್ ಪೆರೇರಾ ಮಾತನಾಡಿ, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಮಹಿಳೆಯರಿಗೆ ಯಾಗಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಇಂತಹ ಕಾರ್ಯಕ್ರಮದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದರು.

ಸಂಜೀವಿನಿ ಒಕ್ಕೂಟದ ೧೫ ಸಂಘದ ಸದಸ್ಯರುಗಳು ವಿವಿಧ ರೀತಿಯ ವ್ಯಾಪಾರದಲ್ಲಿ ತೊಡಗಿಸಿಕೊಂಡು ಗಮನ ಸೆಳೆದರು. ಸಂತೆಮೇಳೆಯಲ್ಲಿ ಗ್ರಾಮಸ್ಥರು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವಿವಿಧ ರೀತಿಯ ವಿವಿಧ ಬಗೆಯ ವಸ್ತುಗಳನ್ನು ಖರೀದಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಸುಬ್ಬೀರ್ ಸಿ.ಇ., ಪಾಂಡAಡ ರಾಣಿ ಗಣಪತಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ರಮ್ಯಾ ಬಿ.ಎಲ್., ಕ್ಲಸ್ಟರ್ ಮೇಲ್ವಿಚಾರಕ ಶಾಂತರಾಜ್, ಒಕ್ಕೂಟದ ಸದಸ್ಯರಾದ ಭಾರತಿ, ಅಂಬಿಕಾ, ಪಾರ್ವತಿ, ನಳಿನಿ, ಮೀನಾ, ಮಸೀದಿ ಆಡಳಿತ ಮಂಡಳಿ ಸದಸ್ಯರಾದ ಅಬ್ದುರಹ್ಮನ್, ಸಿದ್ದಿಕ್ ಉಪಸ್ಥಿತರಿದ್ದರು.