ಮಡಿಕೇರಿ, ಡಿ. ೧೮: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ೪೫ನೇ ಪ್ರಾಂತ ಸಮ್ಮೇಳನದ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ಸಾಗಿತು.
ತೆರೆದ ವಾಹನದಲ್ಲಿ ಭಾರತಾಂಬೆಯ ಭಾವಚಿತ್ರ ಹೊತ್ತ ಮೆರವಣಿಗೆ ಚಂಡೆ ವಾದ್ಯ ಹಾಗೂ ಕೊಡಗಿನ ವಾಲಗದೊಂದಿಗೆ ಸಾಗುತ್ತಿದ್ದರೆ ಅದರ ಮುಂಭಾಗದಲ್ಲಿ ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ನೂರಾರು ವಿದ್ಯಾರ್ಥಿಗಳು ಕೈಯಲ್ಲಿ ಕೇಸರಿ ಧ್ವಜ ಹಿಡಿದು, ಘೋಷಣೆಗಳನ್ನು ಕೂಗುತ್ತಾ ಪ್ರಮುಖ ಬೀದಿಯಲ್ಲಿ ಸಾಗಿದರು. ಕೊಡಗು ಗೌಡ ಸಮಾಜದಿಂದ ಆರಂಭಗೊAಡ ಮೆರವಣಿಗೆಗೆ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಈಶ್ವರ್ ಭಟ್ ಚಾಲನೆ ನೀಡಿದರು. ಚೌಕಿ ಮಾರ್ಗವಾಗಿ ಜ. ತಿಮ್ಮಯ್ಯ ವೃತ್ತಕ್ಕೆ ಸಾಗಿ ಗಾಂಧಿ ಮೈದಾನದಲ್ಲಿ ಮೆರವಣಿಗೆ ಮುಕ್ತಾಯವಾಯಿತು.
ಗಾಂಧಿ ಮೈದಾನದಲ್ಲಿ ಆಯೋಜಿತ ಕಾರ್ಯಕ್ರಮದಲ್ಲಿ ಮಾತನಾಡಿದ ಎಬಿವಿಪಿ ರಾಜ್ಯ ಕಾರ್ಯದರ್ಶಿ ಗೋಪಿ ರಂಗಸ್ವಾಮಿ, ವಿಶ್ವವಿದ್ಯಾನಿಲಯಗಳಿಗೆ ಸರಕಾರ ಸಮರ್ಪಕವಾಗಿ ಅನುದಾನ ನೀಡುತ್ತಿಲ್ಲ. ಕೊಡಗು ವಿಶ್ವವಿದ್ಯಾನಿಲಯವೂ ಸರಕಾರದ ಅವಕೃಪೆಗೆ ಪಾತ್ರವಾಗಿದೆ. ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗುತ್ತದೆ. ಕಾಲೇಜುಗಳ ಅಭಿವೃದ್ಧಿಗೆ ಸರಕಾರ ಸೂಕ್ತ ಅನುದಾನ ಒದಗಿಸಬೇಕು. ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸಬೇಕೆಂದು ಆಗ್ರಹಿಸಿದರು.
ಮಂಗಳೂರು ವಿಭಾಗ ಸಂಚಾಲಕ ಸುವಿತ್ ಶೆಟ್ಟಿ ಮಾತನಾಡಿ, ರಾಜ್ಯದಲ್ಲಿ ಅಭಿವೃದ್ಧಿಯ ಪ್ರಮಾಣ ಕುಂಠಿತವಾಗಿದೆ. ಬಿಟ್ಟಿ ಭಾಗ್ಯಗಳಿಂದ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ. ಪರಿಣಾಮ ಮೂಲಭೂತ ಸೌಲಭ್ಯಗಳು ಜನರಿಗೆ ತಲುಪುತ್ತಿಲ್ಲ. ಹದಗೆಟ್ಟ ರಸ್ತೆಗಳಲ್ಲಿ ಸಂಚಾರ ಮಾಡಿ ಪ್ರಾಣವನ್ನು ಕೈಯಲ್ಲಿಡಿದುಕೊಂಡು ಓಡಾಡುವ ಪರಿಸ್ಥಿತಿ ತಲೆದೋರಿದೆ. ಸರಕಾರ ಮೂಲಭೂತ ಸೌಲಭ್ಯಕ್ಕೆ ಹೆಚ್ಚಿನ ಅನುದಾನ ನೀಡಬೇಕೆಂದು ಒತ್ತಾಯಿಸಿದರು.
ಬೆಂಗಳೂರು ಉತ್ತರ ವಿಭಾಗದ ಸಂಚಾಲಕ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಯಶವಂತ್ ಮಾತನಾಡಿ, ರಾಜ್ಯದಲ್ಲಿ ವಿದ್ಯಾರ್ಥಿ ವಸತಿ ನಿಲಯಗಳ ಸ್ಥಿತಿ ಅಧೋಗತಿಯಲ್ಲಿದೆ. ಮೂಲಭೂತ ಸೌಲಭ್ಯಗಳಿಲ್ಲದೆ ಅದೆಷ್ಟೋ ವಸತಿ ನಿಲಯಗಳಲ್ಲಿ ವಾಸಿಸಲಾಗದ ಸ್ಥಿತಿ ಇದೆ. ಜಿಲ್ಲಾಮಟ್ಟದ ಅಧಿಕಾರಿಗಳು, ವಾರ್ಡನ್‌ಗಳು ವಿದ್ಯಾರ್ಥಿಗಳು ಆರೋಗ್ಯದ ದೃಷ್ಟಿಯಲ್ಲಿ ವಸತಿ ನಿಲಯಗಳನ್ನು ಸುಸಜ್ಜಿತಗೊಳಿಸಬೇಕು. ಸರಕಾರವೂ ಅಗತ್ಯ ಅನುದಾನವನ್ನು ನೀಡಬೇಕೆಂದರು.
ರಾಷ್ಟಿçÃಯ ಕಾರ್ಯಕಾರಿಣಿ ಸದಸ್ಯ ಹೆಚ್.ಕೆ. ಪ್ರವೀಣ್, ರಾಜ್ಯ ಸಹಕಾರ್ಯದರ್ಶಿ ಗುರುಪ್ರಸಾದ್, ಸಾವಿಷ್ಕಾರ್ ಸಂಚಾಲಕಿ ಸೃಷ್ಟಿ ಶಿವಮೂರ್ತಿ, ಇಂಡೀಜಿನಿಯಸ್ ಪ್ರಮುಖ್ ಮನು ಶೆಟ್ಟಿ ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕರುಗಳಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ ಸಮ್ಮೇಳನದ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ ಹೊಳ್ಳ, ಸಹ ಕಾರ್ಯದರ್ಶಿ ಪುರುಷೋತ್ತಮ್, ಕೋಶಾಧ್ಯಕ್ಷ ಚಂದ್ರ ಉಡೋತ್, ಎಬಿವಿಪಿ ಪ್ರಾಂತ ಸಂಘಟನಾ ಕಾರ್ಯದರ್ಶಿ ಬಸವೇಶ್, ಸಹ ಸಂಘಟನಾ ಕಾರ್ಯದರ್ಶಿ ಗಂಗಾಧರ್, ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಶಿವಕುಮಾರ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಮಾಜಿ ಪ್ರಾಂತ ಸಂಘಟನೆ ಕಾರ್ಯದರ್ಶಿ ರಮೇಶ್ ಮಂಗಳೂರು ಸೇರಿದಂತೆ ಇನ್ನಿತರರು ಹಾಜರಿದ್ದರು.