ವೀರಾಜಪೇಟೆ, ಡಿ. ೨೨: "ಕ್ರೀಡಾಕೂಟಗಳು ವಿದ್ಯಾರ್ಥಿಗಳಲ್ಲಿ ಶಾರೀರಿಕ ಆರೋಗ್ಯದೊಂದಿಗೆ ಮಾನಸಿಕ ಆರೋಗ್ಯ ಮತ್ತು ಶಿಸ್ತುಬದ್ಧ ನಾಯಕತ್ವದ ಗುಣಗಳನ್ನು ಬೆಳೆಸುತ್ತದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ, ಭಾರತೀಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಎಸ್. ಅರುಣ್ ಮಾಚಯ್ಯ ಹೇಳಿದ್ದಾರೆ. ಅವರು ವೀರಾಜಪೇಟೆ ಕೊಡವ ಸಮಾಜದ ಪೂಮಾಲೆ ಮಂದ್ ಮೈದಾನದಲ್ಲಿ ತ್ರಿವೇಣಿ ಶಾಲೆಯ ವಾರ್ಷಿಕ ಕ್ರೀಡಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು. “ವಿದ್ಯಾರ್ಥಿಗಳನ್ನು ಸಾಮಾಜಿಕ ಜಾಲತಾಣದ ಹಾವಳಿಯಿಂದ ಒಂದು ಹಂತದವರೆಗೆ ತಡೆಗಟ್ಟಲು ಕ್ರೀಡೆಗಳು ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳಲ್ಲಿ ಉಂಟಾಗುತ್ತಿರುವ ನೈತಿಕ ಮೌಲ್ಯಗಳ ಕುಸಿತದ ಬಗ್ಗೆ ಶಿಕ್ಷಕರು ಹಾಗೂ ಪೋಷಕರು ಸದಾ ಜಾಗೃತರಾಗಿರಬೇಕು. ಶಿಕ್ಷಣ ಸಂಸ್ಥೆಗಳು ವಾರ್ಷಿಕ ಕ್ರೀಡಾ ದಿನಾಚರಣೆಯಂತೆ ಸಾಂಸ್ಕೃತಿಕ ದಿನಾಚರಣೆಯನ್ನು ಏರ್ಪಡಿಸಿದಲ್ಲಿ ವಿದ್ಯಾರ್ಥಿಗಳಲ್ಲಿ ನಮ್ಮ ಸಂಸ್ಕೃತಿ-ಪರAಪರೆ ಬಗ್ಗೆ ಅರಿವು ಮೂಡಲು ಸಹಕಾರಿಯಾಗುತ್ತದೆ" ಎಂದರು.

ರಾಷ್ಟಿçÃಯ ಹಾಕಿಪಟು ಮೇಕೇರಿರ ನಿತಿನ್ ತಿಮ್ಮಯ್ಯ ಕ್ರೀಡಾ ಜ್ಯೋತಿ ಬೆಳಗುವುದರೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷ ಆಪಾಡಂಡ ಕಾರ್ಯಪ್ಪ ಅಧ್ಯಕ್ಷತೆ ವಹಿಸಿದ್ದರು. ಕೊಡವ ಸಮಾಜದ ಅಧ್ಯಕ್ಷ ಅಮ್ಮುಣಿಚಂಡ ರವಿ ಉತ್ತಪ್ಪ, ಉಪಾಧ್ಯಕ್ಷ ಕಾಣತಂಡ ಜಗದೀಶ್, ಗೌರವ ಕಾರ್ಯದರ್ಶಿ ಮಾಳೇಟಿರ ಎ. ಶ್ರೀನಿವಾಸ್, ಕಾರ್ಯದರ್ಶಿ ಮೇರಿಯಂಡ ಅರಸು ಅಚ್ಚಮ್ಮ ವೇದಿಕೆಯಲ್ಲಿದ್ದರು. ಸಂಸ್ಥೆಯ ಪೂರ್ವ ವಿದ್ಯಾರ್ಥಿ ಮಿಸ್ಟರ್ ಇಂಡಿಯಾ ಯೂನಿವರ್ಸ್ ಪ್ರಶಸ್ತಿ ವಿಜೇತ ಕರಿನರವಂಡ ಬಿಷನ್ ಮಾದಪ್ಪ ಅವರನ್ನು ಈ ಸಂದಭದಲ್ಲಿ ಸನ್ಮಾನಿಸಲಾಯ್ತು. ಮುಖ್ಯ ಶಿಕ್ಷಕಿ ಕೋಣೇರಿರ ಕಾವೇರಮ್ಮ ಸ್ವಾಗತಿಸಿದರು. ಕೆ.ಪ್ರತಿಮಾ ಶಾಲಾ ವರದಿ ಮಂಡಿಸಿದರು. ಸೆವೆಂಟಿ ಅಗಸ್ಟಿನ್ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಪೂರ್ವ ವಿದ್ಯಾರ್ಥಿಗಳಿಗಾಗಿ ಆಟೋಟ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕೃಷ್ಣ ಪ್ರಸಾದ್ ಮತ್ತು ಆಶಾ ಅಕ್ಕಮ್ಮ ನಿರೂಪಣೆಗೈದರು.