ಮಡಿಕೇರಿ, ಡಿ. ೨೨: ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಬಿಲ್ಲವ ಸಮಾಜದ ವತಿಯಿಂದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು.
ಬಿಲ್ಲವ ಸಮುದಾಯದ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಯಾಗಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಭಾಗವಹಿಸಿದ್ದರು.
ಕ್ರೀಡಾಪಟುಗಳಿಗೆ ಶುಭ ಕೋರಿ ಮಾತನಾಡಿದ ಶಾಸಕರು, ಕೊಡಗಿನಲ್ಲಿ ಎಲ್ಲಾ ಸಮುದಾಯಗಳು ಕುಟುಂಬಗಳು ಒಗ್ಗಟ್ಟಿನಿಂದ ಇರುವ ಕಾರಣ ಇಂತಹ ಕ್ರೀಡಾಕೂಟಗಳು ಮತ್ತಷ್ಟು ಪ್ರಾಶಸ್ತö್ಯವನ್ನು ಪಡೆಯುತ್ತಿದೆ. ಸಮುದಾಯದ ಯುವ ಪೀಳಿಗೆ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಇಂತಹ ಕ್ರೀಡಾಕೂಟಗಳು ತುಂಬಾ ಸಹಕಾರಿಯಾಗಿದೆ. ಯುವ ಜನತೆಯು ಇಂತಹ ಕ್ರೀಡಾಕೂಟಗಳನ್ನು ಸದುಪಯೋಗಪಡಿಸಿಕೊಂಡು ತಮ್ಮನ್ನು ತಾವು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಭವಿಷ್ಯ ಉಜ್ವಲವಾಗಲಿದೆ ಎಂದು ಹೇಳಿದರು.ಕ್ರೀಡೆಯನ್ನು ಕ್ರೀಡಾಮನೋಭಾವದಿಂದ ಸ್ವೀಕರಿಸಿ ಎಲ್ಲಾ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಲು ಪ್ರಯತ್ನಿಸಿ, ೪ಆರನೇ ಪುಟಕ್ಕೆ
(ಮೊದಲ ಪುಟದಿಂದ) ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನಸ್ಥಿತಿ ಬೆಳೆಸಿಕೊಳ್ಳಿ ಎಂದು ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಬಿಲ್ಲವ ಸಮಾಜದ ಅಧ್ಯಕ್ಷ ಲಿಂಗಪ್ಪ ಪೂಜಾರಿ, ಪಕ್ಷದ ಮುಖಂಡ ಅಪ್ರು ರವೀಂದ್ರ, ಮೈನಾ ಹಾಗೂ ಕಾರ್ಯಕ್ರಮ ಆಯೋಜಕರು, ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.